ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ: ಮಾಜಿ ಶಾಸಕರ ಟಿಕೆಟ್ ರೇಸ್ ನಲ್ಲಿ ಗೆದ್ದ ಎ. ಆರ್. ಕೃಷ್ಣಮೂರ್ತಿ

Assembly Election Congress Second List: ಕೊಳ್ಳೇಗಾಲ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುವ ಮೂಲಕ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಕೈ ಟಿಕೆಟ್ ಫೈನಲ್ ಆದಂತಾಗಿದೆ. ಮೊದಲ ಪಟ್ಟಿಯಲ್ಲಿ ಚಾಮರಾಜನಗರದಿಂದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರುನಿಂದ ಹಾಲಿ ಶಾಸಕ ಆರ್.ನರೇಂದ್ರ ಹಾಗೂ ಗುಂಡ್ಲುಪೇಟೆಯಿಂದ ಗಣೇಶ್ ಪ್ರಸಾದ್ ಅವರನ್ನು ಘೋಷಣೆ ಮಾಡಲಾಗಿತ್ತು.

Written by - Yashaswini V | Last Updated : Apr 6, 2023, 11:29 AM IST
  • ಎ.ಆರ್.ಕೆ ಜೊತೆಗೆ ಮಾಜಿ ಶಾಸಕ ಜಯಣ್ಣ ಮತ್ತೋರ್ವ ಮಾಜಿ ಶಾಸಕ ಬಾಲರಾಜು ಟಿಕೆಟ್ ಆಕಾಂಕ್ಷಿಗಳಾಗಿದ್ದರು.
  • ಅಳೆದು-ತೂಗಿ ಕೊನೆಗೂ ಕೃಷ್ಣಮೂರ್ತಿ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.
  • ಎ.ಆರ್.ಕೃಷ್ಣಮೂರ್ತಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಮಾಜಿ ಶಾಸಕರಾಗಿದ್ದರು.
ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ: ಮಾಜಿ ಶಾಸಕರ ಟಿಕೆಟ್ ರೇಸ್ ನಲ್ಲಿ ಗೆದ್ದ ಎ. ಆರ್. ಕೃಷ್ಣಮೂರ್ತಿ  title=

ಚಾಮರಾಜನಗರ: ರಾಜ್ಯ ವಿಧಾನಸಭಾ ಚುನಾವಣೆಗೆ ಬಹು ನಿರೀಕ್ಷಿತ ಕಾಂಗ್ರೆಸ್ ಎರಡನೇ ಪಟ್ಟಿ ಘೋಷಿಸಲಾಗಿದ್ದು ಮೂವರು ಮಾಜಿ ಶಾಸಕರು ಟಿಕೆಟ್ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. 

ಎ.ಆರ್.ಕೃಷ್ಣಮೂರ್ತಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡ ಮಾಜಿ ಶಾಸಕರಾಗಿದ್ದರು. ಎ.ಆರ್.ಕೆ ಜೊತೆಗೆ ಮಾಜಿ ಶಾಸಕ ಜಯಣ್ಣ ಮತ್ತೋರ್ವ ಮಾಜಿ ಶಾಸಕ ಬಾಲರಾಜು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಅಳೆದು-ತೂಗಿ ಕೊನೆಗೂ ಕೃಷ್ಣಮೂರ್ತಿ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. 

ಇದನ್ನೂ ಓದಿ- Karnataka Assembly Election: 224 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ ರಾಜ್ಯ ಚುನಾವಣಾ ಸಮಿತಿ

ಕೊಳ್ಳೇಗಾಲ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುವ ಮೂಲಕ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಕೈ ಟಿಕೆಟ್ ಫೈನಲ್ ಆದಂತಾಗಿದೆ. ಮೊದಲ ಪಟ್ಟಿಯಲ್ಲಿ ಚಾಮರಾಜನಗರದಿಂದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರುನಿಂದ ಹಾಲಿ ಶಾಸಕ ಆರ್.ನರೇಂದ್ರ ಹಾಗೂ ಗುಂಡ್ಲುಪೇಟೆಯಿಂದ ಗಣೇಶ್ ಪ್ರಸಾದ್ ಅವರನ್ನು ಘೋಷಣೆ ಮಾಡಲಾಗಿತ್ತು.

ಇದನ್ನೂ ಓದಿ- ಕೋಮು ಪ್ರಚೋದಿತ ಹೇಳಿಕೆ, ಶಾಸಕ ಮುನಿರತ್ನ ವಿರುದ್ದ ಎಫ್ಐಆರ್ ದಾಖಲು

ಗಮನಾರ್ಹವಾಗಿ, ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ 124 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಇದೀಗ ಎರಡನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News