ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ ಘೋಷಿಸಲು ಬಿಜೆಪಿಯ ಕಿರುಕುಳವೇ ಕಾರಣ: ಕಾಂಗ್ರೆಸ್
Karnataka assembly election 2023: ಬಿಜೆಪಿಯಲ್ಲಿದ್ದೂ ಬಿಜೆಪಿಗರಂತಿರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ರಾಜಕೀಯ ನಿವೃತ್ತಿ ಘೋಷಿಸಿರುವುದಕ್ಕೆ ಬಿಜೆಪಿಯ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
ಬೆಂಗಳೂರು: ಬಿಜೆಪಿಯಲ್ಲಿದ್ದೂ ಬಿಜೆಪಿಗರಂತಿರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ರಾಜಕೀಯ ನಿವೃತ್ತಿ ಘೋಷಿಸಿರುವುದಕ್ಕೆ ಬಿಜೆಪಿಯ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸತತ 5 ಬಾರಿ ಶಾಸಕರಾಗಿ ಆಯ್ಕೆಯಾದ, ಬಂಟ ಸಮುದಾಯದ ಪ್ರಭಲ ನಾಯಕರಾಗಿದ್ದರೂ ಸಂಪುಟಕ್ಕೆ ಸೇರಿಸಿಕೊಳ್ಳದ ಬಿಜೆಪಿ ಶ್ರೀನಿವಾಸ ಶೆಟ್ಟರಿಗಷ್ಟೇ ಅಲ್ಲ ಇಡೀ ಬಂಟ ಸಮುದಾಯವನ್ನು ಅವಮಾನಿಸಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಎಪ್ರಿಲ್ 8 ಅಥವಾ 9 ರಂದು ಬಿಜೆಪಿ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ-ಸಿಎಂ ಬೊಮ್ಮಾಯಿ
‘ಬಂಟ ಸಮುದಾಯದ ನಾಯಕ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಬಿಜೆಪಿಯಿಂದ ಅವಮಾನಿತರಾಗಿ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದಾರೆ. ಬಿಜೆಪಿ ಹಾಲಾಡಿಯವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿಲ್ಲ, ಪಕ್ಷದಲ್ಲಿ ಉನ್ನತ ಹುದ್ದೆಗಳನ್ನು ನೀಡಲಿಲ್ಲ, ಈಗ ನೋವಿನ ವಿದಾಯ ಹೇಳುವ ಮೂಲಕ ಬಿಜೆಪಿ ಸಜ್ಜನರ ಪಕ್ಷವಲ್ಲವೆಂದ ಸಂದೇಶ ನೀಡಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.
ದೇವರ ದುಡ್ಡಿಗೆ ಬಿಜೆಪಿ ಕನ್ನ ಆರೋಪ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
ವಿಜಯೇಂದ್ರೆ ಹೆಸರು ಬಂದಿದ್ದಕ್ಕಾ?
ವಿಜಯೇಂದ್ರ ಹೆಸರು ಬಂದಿದ್ದಕ್ಕಾ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.