"ರಾಹುಲ್‌ ಗಾಂಧಿ ವಿರುದ್ಧದ ಷಡ್ಯಂತ್ರ, ದ್ವೇಷ ರಾಜಕೀಯಕ್ಕೆ ರಾಜ್ಯದ ಜನರಿಂದ ಬಿಜೆಪಿಗೆ ತಕ್ಕ ಉತ್ತರ- ಬಿಕೆ ಹರಿಪ್ರಸಾದ್

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿರುವ ರಾಜ್ಯದ ಮತದಾರರು, ಕಾಂಗ್ರೆಸ್‌ಗೆ ಅಭೂತಪೂರ್ವ ಬಹುಮತ ನೀಡಿದ್ದಾರೆ. 

Last Updated : May 13, 2023, 02:17 PM IST
  • ಬಿಜೆಪಿಯ ನಕಲಿ ಹಿಂದುಳಿದ ವರ್ಗಗಳ ನಾಯಕರು ರಾಜ್ಯದ ಹಿಂದುಳಿದ ವರ್ಗಗಳ ಜನರಿಗೆ ಮೋಸ ಮಾಡಲು ಹೊರಟಿದ್ದರು
  • ಈ ಚುನಾವಣೆಯಲ್ಲಿ ಕರ್ನಾಟಕದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ
"ರಾಹುಲ್‌ ಗಾಂಧಿ ವಿರುದ್ಧದ ಷಡ್ಯಂತ್ರ, ದ್ವೇಷ ರಾಜಕೀಯಕ್ಕೆ ರಾಜ್ಯದ ಜನರಿಂದ ಬಿಜೆಪಿಗೆ ತಕ್ಕ ಉತ್ತರ- ಬಿಕೆ ಹರಿಪ್ರಸಾದ್ title=

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿರುವ ರಾಜ್ಯದ ಮತದಾರರು, ಕಾಂಗ್ರೆಸ್‌ಗೆ ಅಭೂತಪೂರ್ವ ಬಹುಮತ ನೀಡಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಕೋಲಾರದಲ್ಲಿ ಲೋಕಸಭಾ ಚುನಾವಣೆ ವೇಳೆ ಮಾಡಿದ್ದ ಭಾಷಣವನ್ನು ಮುಂದಿಟ್ಟುಕೊಂಡು ಷಡ್ಯಂತ್ರ ರೂಪಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದರು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್‌ ಗಾಂಧಿಯವರ ವಿರುದ್ಧದ ಬಿಜೆಪಿಯ ಷಡ್ಯಂತ್ರಕ್ಕೆ ಸರಿಯಾದ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯ ನಕಲಿ ಹಿಂದುಳಿದ ವರ್ಗಗಳ ನಾಯಕರು ರಾಜ್ಯದ ಹಿಂದುಳಿದ ವರ್ಗಗಳ ಜನರಿಗೆ ಮೋಸ ಮಾಡಲು ಹೊರಟಿದ್ದರು. ಈ ಚುನಾವಣೆಯಲ್ಲಿ ಕರ್ನಾಟಕದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯುವುದಿಲ್ಲ ಎಂಬ ಸಂದೇಶವನ್ನು ಈ ಫಲಿತಾಂಶದ ಮೂಲಕ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ: Chikkamagalore Vidhan Sabha Chunav: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೈ ಕಲಿಗಳದ್ದೇ ಮೇಲು ಗೈ!

2019ರಲ್ಲಿ ಆಪರೇಷನ್‌ ಕಮಲ ನಡೆಸಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದ್ದ ಬಿಜೆಪಿ, ಆರಂಭದ ದಿನಗಳಿಂದಲೂ ಮತೀಯ ಗೂಂಡಾಗಿರಿಗೆ ಪ್ರಚೋದನೆ ನೀಡುತ್ತಾ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿತ್ತು. ಭ್ರಷ್ಟಾಚಾರ, ದುರಾಡಳಿತ ಮೇರೆ ಮೀರಿತ್ತು. 40% ಭ್ರಷ್ಟಾಚಾರದ ಸರ್ಕಾರ ಎಂಬ ಹಣಪಟ್ಟಿ ಅಂಟಿಸಿಕೊಂಡಿದ್ದ ಬಿಜೆಪಿ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆದಿದ್ದಾರೆ. ಬಿಜೆಪಿ ಅಧಿಕಾರದಲ್ಲಿಮುಂದುವರಿದಿದ್ದರೆ ರಾಜ್ಯವು ಇನ್ನೂ ಹಿನ್ನಡೆ ಅನುಭವಿಸುವ ಅಪಾಯವಿತ್ತು. ಅದನ್ನು ಅರಿತ ಮತದಾರರು ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ. ರೋಡ್‌ ಶೋ, ಪ್ರಚಾರದ ಹೆಸರಿನಲ್ಲಿ ಕರ್ನಾಟಕದ ಜನರನ್ನು ಮತ್ತೆ ವಂಚಿಸುವ ಬಿಜೆಪಿ ನಾಯಕರ ಪ್ರಯತ್ನ ವಿಫಲವಾಗಿದೆ. ರಾಜ್ಯದ ಉದ್ದಗಲಕ್ಕೆ ಜನರು ಬದಲಾವಣೆಯ ಪರ ಮತ ಚಲಾಯಿಸಿರುವುದೇ ಇದಕ್ಕೆ ಸಾಕ್ಷಿ ಎಂದರು.

ರಾಜ್ಯದ ಜನರು ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್‌ ನೀಡಿದ ಗ್ಯಾರೆಂಟಿಗಳಲ್ಲಿ ನಂಬಿಕೆ ಇರಿಸಿದ್ದು, ಸ್ವಚ್ಛ ಮತ್ತು ಭ್ರಷ್ಟಾಚಾರರಹಿತ ಆಡಳಿತವನ್ನು ನಮ್ಮ ಪಕ್ಷ ನೀಡಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿರುವುದಕ್ಕಾಗಿ ರಾಜ್ಯದ ಸಮಸ್ತ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 
 

Trending News