Karnataka Assembly Elections 2023: ನಗರದಲ್ಲಿ ಎಲ್ಲಾ ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ಬಂದು ನಮ್ಮ ಸಂವಿಧಾನ ನೀಡಿರುವಂತಹ ಮತದಾನದ ಅಧಿಕಾರವನ್ನು ಚಲಾಯಿಸುವುದರ ಜೊತೆಗೆ ಎಲ್ಲರಲ್ಲೂ ಮತದಾನ ಮಾಡಲು ಪ್ರೇರೇಪಿಸೋಣ ಎಂದು ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು.


COMMERCIAL BREAK
SCROLL TO CONTINUE READING

ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚುವಂತೆ ಮಾಡುವ ಉದ್ದೇಶದಿಂದ ಮಹಿಳಾ ಮತದಾರರಲ್ಲಿ ಅರಿವು ಮೂಡಿಸಲು ಪುರಭವನ (ಟೌನ್‌ಹಾಲ್)ದಲ್ಲಿ ಹಮ್ಮಿಕೊಂಡಿದ್ದ ಪಿಂಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಗರದಲ್ಲಿ ಎಲ್ಲಾ ಮಹಿಳೆಯರು ಮತಗಟ್ಟೆಗಳಿಗೆ ಬಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ಹೇಳಿದರು. 


ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಮಾತನಾಡಿ, ನಗರದಲ್ಲಿ ಈಗಾಗಲೇ ಎಲ್ಲರಿಗೂ ಮತದಾರರ ಗುರುತಿನ ಚೀಟಿ ವಿತರಣೆ ಮಾಡಿದ್ದು, ಅದರಲ್ಲಿ ಎಲ್ಲಾ ಮಾಹಿತಿಯೂ ಲಭ್ಯವಿರಲಿದೆ. ಇದರಿಂದ ಸುಲಭವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಬಹುದಾಗಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡಲು ಕೋರಿದರು.


ಇದನ್ನೂ ಓದಿ- ಚುನಾವಣೆ ಎಫೆಕ್ಟ್: ಇಂದಿನಿಂದ ಮದ್ಯ ಪ್ರಿಯರಿಗೆ ಸಿಗಲ್ಲ ಎಣ್ಣೆ


ಮತದಾನದ ದಿನ ವೇತನ ಸಹಿತ ರೆಜೆಯಿರಲಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡಿ. ಮಹಿಳೆಯರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ 5 ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಪಿಂಕ್ ಬೂತ್ ಗಳಲ್ಲಿ ಮಹಿಳಾ ಅಧಿಕಾರಿ/ಸಿಬ್ಬಂದಿಗಳೇ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ ಪಿಂಕ್ ಬಣ್ಣದಲ್ಲಿ ವಿವಿಧ ಚಿತ್ರಗಳನ್ನು ರಚಿಸುವುದು, ಮತಚಾಲಯಿಸಲು ಬರುವವರಿಗೆ ಸ್ವಾಗತ ಕೋರುವುದು, ಸ್ವಾಗತ ಕಮಾನು, ಪಿಂಕ್ ಬಲೂನ್‌ಗಳ ಅಲಂಕಾರ ಸೇರಿದಂತೆ ಮಹಿಳೆಯರನ್ನು ಆಕರ್ಷಿಸಿಸುವ ರೀತಿ ಮತಗಟ್ಟೆಗಳನ್ನು ಸಿದ್ದಪಡಿಲಸಾಗುವುದು ಎಂದು ಹೇಳಿದರು.


ನಗರದಲ್ಲಿ ಪಿಂಕ್ ಮತಗಟ್ಟೆಗಳು ಮಾತ್ರವಲ್ಲದೆ ವಿವಿಧ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಮಾಡಲಾಗುತ್ತಿದ್ದು, ಅದರಂತೆ ಅಂಗವಿಕಲರ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ತಂತ್ರಜ್ಞಾನ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ಸೈನಿಕ ಮತಗಟ್ಟೆ, ಕ್ರೀಡಾ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಸೈನಿಕರ ವಿಶೇಷ ಮತಗಟ್ಟೆಗಳಿರಲಿವೆ ಎಂದರು.


ಮತದಾನದ ದಿನ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಯಾವುದಾದರು ಮತಗಟ್ಟೆಗಳ ಬಳಿ ತುರ್ತು ಸಂಧರ್ಭ ಬಂದಲ್ಲಿ, ಆಂಬುಲೆನ್ಸ್ ಮೂಲಕ ವೈದ್ಯರ ಸೇವೆ ಒದಗಿಸಲಾಗುವುದು ಎಂದು ಹೇಳಿದರು.


ವಿವಿಧ ರಂಗದ ಪ್ರತಿನಿಧಿಗಳು ಭಾಗಿ:
ಪಿಂಕಥಾನ್ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವೈದ್ಯರು, ಆಶಾಕಾರ್ಯಕರ್ತೆಯರು, ಪೌರಕಾರ್ಮಿಕರು, ಸ್ವಸಹಾಯ ಸಂಘದ ಗುಂಪುಗಳು, ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಎನ್.ಎಸ್.ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಪ್ರತಿಜ್ಞೆ ವಿಧಿ ಬೋಧನೆ:
ವಿವಿಧ ರಂಗಗಳ ಮಹಿಳಾ ಪ್ರತಿನಿಧಿಗಳು ಪಿಂಕಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡುವ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಿದರು.


ಇದನ್ನೂ ಓದಿ- "ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆ"-ಸಿದ್ದರಾಮಯ್ಯ


ವೋಟ್-ಎ-ಥಾನ್(Vote-A-Thon) ವಿಜೇತರಿಗೆ ಪ್ರಶಸ್ತಿ ವಿತರಣೆ:
ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023ರಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಲು ಆಯೋಜಿಸಿದ್ದ ವೋಟ್-ಎ-ಥಾನ್(Vote-A-Thon) ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ವಿತರಿಸಲಾಯಿತು. 


ಪೋಸ್ಟರ್, ರೀಲ್ಸ್, ಸ್ಲೋಗನ್ ನಲ್ಲಿ ಪ್ರಥಮ ಬಂದವರಿಗೆ 5 ಸಾವಿರ ರೂ. ನಗದು ಜೊತೆಗೆ ಸ್ಮರಣಿಕೆ, ದ್ವಿತೀಯ ಬಂದವರಿಗೆ 3 ಸಾವಿರ ರೂ. ನಗದು ಬಹುಮಾನದ ಜೊತೆಗೆ ಸ್ಮರಣಿಕೆಯನ್ನು ವಿತರಿಸಲಾಯಿತು.


ವೋಟ್-ಎ-ಥಾನ್ ಸ್ಪರ್ಧೆಯ ವಿಜೇತರ ವಿವರ:
ಪೋಸ್ಟರ್ ಸ್ಪರ್ಧೆ:
1. ನಾಮದೇವ ಕಾಗದಗಾರ - ಪ್ರಥಮ
2. ವಿ.ಆರ್.ಸಿ ಶೇಖರ್ - ದ್ವಿತೀಯ


ರೀಲ್ಸ್ ಸ್ಪರ್ಧೆ:
1. ಎಸ್.ಎನ್.ಕ್ರಿಯೇಷನ್ಸ್(ಎನ್. ಚಂದ್ರಶೇಖರ) : ಪ್ರಥಮ


ಸ್ಲೋಗನ್ ಸ್ಪರ್ಧೆ:
1. ಪ್ರಶಾಂತ್ ಮೊಟಗಿ - ಪ್ರಥಮ
2. ಶ್ರೀನಿವಾಸ್ - ದ್ವಿತೀಯ


ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.