ಬೆಂಗಳೂರು : ನಗರದ ಕೆಪಿಸಿಸಿ ಕಚೇರಿಯಲ್ಲಿ ಸಿಪಿಐ -ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಸಿಪಿಐ ಜೊತೆ ನಮ್ಮ ಸಿದ್ದಾಂತದಲ್ಲಿ ಬಿನ್ನತೆ ಇರಬಹುದು ಆದರೆ, ನಮ್ಮ ಇಬ್ಬರ ಹೋರಾಟ ಬೆಲೆ ಏರಿಕೆ, ಭ್ರಷ್ಟಾಚಾರ ವಿರುದ್ಧ. ಹೀಗಾಗಿ ಸಿಪಿಐ 7 ಕಡೆ ಅಭ್ಯರ್ಥಿ ಸ್ಪರ್ಧೆ ಮಾಡುತ್ತಿದ್ದಾರೆ. ಇದನ್ನ ಹೊರತು ಪಡಿಸಿ 215 ಕಡೆ ನಮಗೆ ಬೆಂಬಲ ಸೂಚಿಸಿದ್ದಾರೆ, ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ತಿಳಿಸಿದರು.


COMMERCIAL BREAK
SCROLL TO CONTINUE READING

215 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ : ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಏಳು ಕ್ಷೇತ್ರಗಳಲ್ಲಿ ಸಿಸಿಐ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಹಾಗೂ ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಗೆ ಮತ್ತು ಬಾಗೇಪಲ್ಲಿಯಿಂದ ಸ್ಪರ್ಧಿಸುತ್ತಿರುವ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಭಾರತ ಕಮ್ಯೂನಿಸ್ಟ್ ಪಕ್ಷ ಬೆಂಬಲ ಸೂಚಿಸುತ್ತದೆ. ಉಳಿದ 215 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ನೀಡುತ್ತದೆ, ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದರು.


ಇದನ್ನೂ ಓದಿ:ಲಿಂಗಾಯತ ಸಿಎಂಗಳ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ: ಸಿಎಂ ಬೊಮ್ಮಾಯಿ‌


ಬಿಜೆಪಿ ಸೋಲಿಸಬೇಕು: ಸಿಪಿಐ - ಕಾಂಗ್ರೆಸ್ ಗುರಿ! : ಈ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ನಡೆಸಿದ ಭ್ರಷ್ಟಾಚಾರಕ್ಕೆ ಮಿತಿಯೇ ಇಲ್ಲ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸ್ವತಃ ಮುಖ್ಯಮಂತ್ರಿಗಳೇ ಕೋಮುವಾದಿ ಶಕ್ತಿಗಳಿಗೆ ಕುಮ್ಮಕ್ಕು ಕೊಟ್ಟ ಹಲವು ನಿದರ್ಶನಗಳಿವೆ. ತಮ್ಮ ಪಕ್ಷದ ಮತೀಯವಾದಿ ವಿಷಯಗಳನ್ನು ಪಠ್ಯಪಸ್ತಕಗಳಲ್ಲಿ ಅಳವಡಿಸಿ ಮಕ್ಕಳ ಮನಸ್ಸನ್ನು ಕಲಷಿತಗೊಳಿಸಲು ಯತ್ನಿಸಿದ್ದನ್ನು ನಾವು ಮರೆಯುವಂತಿಲ್ಲ. 


ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲದಿರುವಾಗಲೇ ಸರ್ಕಾರ ರಾಜ್ಯದಲ್ಲಿ ಅದನ್ನು ಅನುಷ್ಠಾನ ಮಾಡಿ ವಿದ್ಯಾರ್ಥಿಗಳ ನಡುವೆ ಗೊಂದಲ ಉಂಟು ಮಾಡಿತು. ಇಡೀ ಶೈಕ್ಷಣಿಕ ವರ್ಷವೇ ಗೊಂದಲದ ಗೂಡಾಯಿತು. ಮತೀಯ ದ್ವೇಷಕ್ಕೆ ಬಲಿಯಾದ ಅಮಾಯಕ ವ್ಯಕ್ತಿಗಳಿಗೆ ಸರ್ಕಾರ ಪರಿಹಾರ ನೀಡುವಲ್ಲಿ ಮತೀಯ ಆಧಾರದಲ್ಲಿ ತಾರತಮ್ಯ ಮಾಡಿದ್ದು ಸಂವಿಧಾನಕ್ಕೆ ಎಸಗಿದ ಅಪಚಾರ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್‌ ಖಾಸಗೀಕರಣದ ಮಸೂದೆಯನ್ನು ಜಾರಿ ಮಾಡುವ ಮೂಲಕ ರಾಜ್ಯದ ರೈತ ಸಮುದಾಯಕ್ಕೆ ದ್ರೋಹ ಬಗೆದಿದೆ.


ಇದನ್ನೂ ಓದಿ: Karnataka Election 2023: ಇಂದು ಬಾಗಲಕೋಟೆ, ವಿಜಯಪುರದಲ್ಲಿ ರಾಹುಲ್ ಗಾಂಧಿ ಮತಬೇಟೆ


ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದು, ಹೋರಾಟದ ಮುಖಾಂತರ ಕಾರ್ಮಿಕರು ಗಳಿಸಿದ್ದ ದಿನಕ್ಕೆ 8 ಗಂಟೆಗಳ ಕಾಲ ದುಡಿಯುವ ಹಕ್ಕನ್ನು ಕಸಿದುಕೊಂಡಿದೆ. ಅಸುರಕ್ಷತೆಯ ವಾತಾವರಣದಲ್ಲೂ ಮಹಿಳಾ ಕಾರ್ಮಿಕರನ್ನು ರಾತ್ರಿ ಪಾಳೆಯದಲ್ಲಿ ಕೆಲಸ ಮಾಡುವ ನಿಯಮವನ್ನು ಜಾರಿಗೊಳಿಸಿದೆ. ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿ ಆರ್‌ಎಸ್‌ಎಸ್ ನ ಗುಪ್ತ ಕಾರ್ಯಸೂಚಿಯನ್ನು ಅನುಷ್ಠಾನ ಮಾಡಿದೆ. ಮಹಿಳೆಯರ ಮತ್ತು ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದರೂ ಬಿಜೆಪಿ ಸರ್ಕಾರ ಕಣ್ಮುಚ್ಚಿ ಕುಳಿತಿದೆ.


ಕರ್ನಾಟಕದ ಸಾರ್ವಜನಿಕ ಉದ್ದಿಮೆಗಳು ಮತ್ತು ಸಹಕಾರಿ ಕ್ಷೇತ್ರದ ನಂದಿನಿಯಂತಹ ಉದ್ಯಮಗಳನ್ನು ಖಾಸಗೀಕರಣ ಮಾಡಲು ಬಿಜೆಪಿ ಸರ್ಕಾರ ಹೊಂಚು ಹಾಕುತ್ತಿದೆ. ಸ್ಥಳೀಯ ಭಾಷೆಗಳ ಮೇಲೆ ಹಿಂದಿ ಭಾಷೆಯನ್ನು ಹೇರುವ ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಕರ್ನಾಟಕದಲ್ಲಿ ಕನ್ನಡದ ಮೇಲೆ ಬಿಜೆಪಿ ಸರ್ಕಾರ ಮಾಡುತ್ತಿರುವುದು ಕನ್ನಡಿಗರ ಪ್ರತಿರೋಧಕ್ಕೂ ಕಾರಣವಾಗಿದೆ. ಅಲ್ಲದೆ ನಾಡಿನ ಲಕ್ಷಾಂತರ ಎಕರೆ ಗೋಮಾಳವನ್ನು ಆ‌ಎಸ್‌ಎಸ್‌ ಪರಿವಾರದ ಸಂಘ ಸಂಸ್ಥೆಗಳಿಗೆ ಪರಭಾರೆ ಮಾಡಲು ಕ್ರಮ ಕೈಗೊಂಡಿದೆ, ಎಂದು ಸುಂದರೇಶ್ ಹೇಳಿದರು.


ಇದನ್ನೂ ಓದಿ: HD Kumaraswamy: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಜ್ವರ! ಮಣಿಪಾಲ್ ಆಸ್ಪತ್ರೆಗೆ ದಾಖಲು


ಒಟ್ಟಾರೆ ರಾಜ್ಯದ ನೆಲ, ಜಲವನ್ನು ಕಾರ್ಪೊರೇಟ್ ಕಂಪನಿಗಳಿಗೆ ದಾನ ಮಾಡಲು ಹೊರಟಿರುವ ಹಾಗೂ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸದ, ಭ್ರಷ್ಟಾಚಾರದಿಂದ ಕೂಡಿದ ಮತೀಯವಾದಿ ಆರ್ ಎಸ್‌ಎಸ್‌-ಬಿಜೆಪಿ ಸರ್ಕಾರ ಅಧಿಕಾರದಿಂದ ತೊಲಗಬೇಕಿದೆ. ಅದಕ್ಕಾಗಿ ಈ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಸೋಲಿಸಲೇಬೇಕಿದೆ.


ಅತಂತ್ರ ವಿಧಾನಸಭೆ ತಡೆಯಬೇಕಿದ : ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದರ ಜೊತೆಗೆ ಅತಂತ್ರ ವಿಧಾನಸಭೆಯ ಸಾಧ್ಯತೆಯನ್ನು ತಡೆಯಬೇಕಿದೆ. ಈ ದಿಶೆಯಲ್ಲಿ ರಾಜ್ಯಾದ್ಯಂತ ಬಿಜೆಪಿಯನ್ನು ಎದುರಿಸುತ್ತಿರುವ ಜಾತ್ಯಾತೀತ, ಪ್ರಜಾಸತ್ತಾತ್ಮಕ ಪಕ್ಷವನ್ನು ಬೆಂಬಲಿಸುವ ಅಗತ್ಯವಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಅಭಿಪ್ರಾಯ ಪಡುತ್ತದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ