"ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ": ಡಿ.ಕೆ. ಶಿವಕುಮಾರ್

ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ

Written by - Prashobh Devanahalli | Edited by - Manjunath N | Last Updated : Mar 26, 2023, 04:23 PM IST
  • ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ.
  • ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ.
  • ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ.
"ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ": ಡಿ.ಕೆ. ಶಿವಕುಮಾರ್ title=
file photo

ಬೆಂಗಳೂರು: ‘ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ’ ಎಂದು ಡಿ.ಕೆ. ಶಿವಕುಮಾರ್ ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : NIA : ಕುಕ್ಕರ್ ಬಾಂಬ್ ರೂವಾರಿ ಶಾರೀಖ್ ಬಗ್ಗೆ ಸ್ಫೋಟಕ ಮಾಹಿತಿ ಪತ್ತೆ!

ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರು ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ಅವರ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಆದರ ವಿಚಾರಣೆ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News