ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ

ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು, ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂದು ಪೊಲೀಸ್‌ ಅಧಿಕಾರಿಗಳನ್ನ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ತರಾಟೆಗೆ ತೆಗೆದುಕೊಂಡರು.

Written by - Prashobh Devanahalli | Edited by - Krishna N K | Last Updated : May 23, 2023, 04:53 PM IST
  • ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ.
  • ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು.
  • ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಡಿಸಿಎಂ ಡಿಕೆಶಿವಕುಮಾರ್.
ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ title=

ಬೆಂಗಳೂರು : ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಡಿಸಿಎಂ ಡಿಕೆಶಿವಕುಮಾರ್, ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು..? ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂದರು.

ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು, ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ. PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ omr ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರನ್ನೇ ಹರಾಸ್ ಮಾಡಿದ್ದೀರಾ. ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ, ಎಂದು ಗರಂ ಆದರು. 

ಇದನ್ನೂ ಓದಿ: ರಾಜ್ಯದ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಆಯ್ಕೆ

ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ  ಹಾಳು‌ ಮಾಡಿದ್ದೀರ ನೀವು. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರ್ಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರ್ಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡೋದು ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದ್ರೆ ಸಾಕು. ನಿಮ್ಮ ಹಿಂದಿನ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯೊಲ್ಲ ಎಂದರು.

ಅಲ್ಲದೆ, ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿದ್ರಿ. ಅವರನ್ನು ಹರಾಸ್ ಮಾಡಿದ್ರಿ. ನಮ್ಮನ್ನೇ, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡ್ತೀರಾ..? ಎಂದು ಡಿಸಿಎಂ ಪ್ರಶ್ನಿಸಿದರು.

ಇದನ್ನೂ ಓದಿ:  ಸಿದ್ದರಾಮಯ್ಯರೇ 5 ವರ್ಷ ಪೂರ್ಣಾವಧಿ ಸಿಎಂ, ಅಧಿಕಾರ ಹಂಚಿಕೆ ಇಲ್ಲ..!

ಮುಂದುವರೆದು ಮಾತನಾಡಿ, ಎದುರು ಪಾರ್ಟಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಕುಣಿದ್ರಿ. ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ ನೀವು. ಅದು ಕ್ರೈಂ ಅಲ್ವಾ.? ನೀವು ಏನೇನೂ ಮಾಡಿದ್ದೀರಾ ಅಂತ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ವಾಚ್ ಮಾಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯೊಲ್ಲ. ನೀವು ಬದಲಾಗಬೇಕು. ನಿಮ್ಮ ವರ್ತನೆ ಬದಲಾಗಬೇಕು ಎಂದು ಎಚ್ಚರಿಕೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News