ಬೆಂಗಳೂರು: ಮಹಿಳೆಯರನ್ನು ಅಪಮಾನ ಮಾಡುವುದು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಕುಟುಂಬವನ್ನು ಟೀಕಿಸುವುದು ಬಿಜೆಪಿಯವರ ಚಾಳಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ‘ವಿಷಕನ್ಯೆ’ ಎಂದು ಕರೆದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

‘ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇಡೀ ದೇಶದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಯತ್ನಾಳ್ ಅವಹೇಳನಕಾರಿ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕ್ಷಮೆ ಕೇಳಬೇಕು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಬೇಕು’ ಎಂದು ಡಿಕೆಶಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೇ.10 ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ


‘ಭಾರತೀಯ ಸಂಸ್ಕೃತಿ ಮಹಿಳೆಯರನ್ನು ಪೂಜಿಸುವ ಸಂಸ್ಕೃತಿ. ನಾವು ನಮ್ಮ ದೇಶವನ್ನು ಭಾರತ ಮಾತೆ ಎಂದು ಕರೆಯುತ್ತೇವೆ. ಮಹಿಳೆಯರನ್ನು ಅಪಮಾನ ಮಾಡುವುದು, ನೆಹರೂ ಕುಟುಂಬವನ್ನು ಟೀಕಿಸುವುದು ಬಿಜೆಪಿಯವರ ಚಾಳಿ. ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ವಿಧವೆ ಎಂದು ನೀವೇ ಕರೆದಿದ್ದಿರಿ, ಇದೇ ನಿಮ್ಮ ಸಂಸ್ಕೃತಿಯಾ ಪ್ರಧಾನಿಗಳೇ?’ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.


ಪ್ರಧಾನಿ ಮೋದಿಯವರು ವರ್ಚುವಲ್ ಸಭೆ ಮಾಡಿ 50 ಲಕ್ಷ ಜನರ ಜೊತೆ ಸಭೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗದ ನೀತಿ ಸಂಹಿತೆ ಏನು ಹೇಳುತ್ತದೆ? ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಅವರ ಈ ಸಭೆ ಮಾಡಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಲಾಗಿತ್ತೇ?’ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ದಲಿತರು, ಹಿಂದುಳಿದವರು ಭಿಕ್ಷುಕರೇ?: ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು



ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.