`ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ`
ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ ಎಂದು ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.
ಬೆಂಗಳೂರು: ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ ಎಂದು ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.
ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: IPL 2023ರ ಮೊದಲ ಪಂದ್ಯದಲ್ಲಿಯೇ ಧೋನಿ ನಾಯಕತ್ವದ CSK ಸೋಲಲು ಕನ್ನಡದ ಈ ಖ್ಯಾತ ನಟಿ ಕಾರಣ!
ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಬೇಕಿದ್ದ ಸರ್ಕಾರ, ಅದರ ಬದಲಿಗೆ ರೌಡಿ ಶೀಟರ್ ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲ ಜನಸಾಮಾನ್ಯರು ಉಣ್ಣಬೇಕಿದೆ.
ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ.
ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ.
ಇದನ್ನೂ ಓದಿ: IPL ಇತಿಹಾಸದಲ್ಲಿಯೇ ಬೆಸ್ಟ್ ಕ್ಯಾಚ್: ಬೌಂಡರಿ ಲೈನ್ ಬಳಿ ಈ ಕ್ರಿಕೆಟಿಗ ಮಾಡಿದ ಸಾಹಸಕ್ಕೆ ಇಡೀ ಸ್ಟೇಡಿಯಂ ಶಾಕ್!
ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತೇನೆ.
ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಆಗ್ರಹಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.