Election 2023: ಸಿಎಂ ಆಗೋಕೆ ಏನ್ ಮಾಡಬೇಕು? ವಿ.ಸೋಮಣ್ಣಗೆ ಬಾಲಕನ ಪ್ರಶ್ನೆ!
Karnataka Assembly Election 2023: 2006ರ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಾಲಪುರದಿಂದ ಮೈಸೂರಿಗೆ ಹೋಗಿದ್ದೇನೆ. ನನ್ನ ಕಾರಿನ ಗ್ಲಾಸ್ ಒಡೆದಿದ್ದರು ಪ್ಯಾಂಟ್ ಹರಿದು ಹಾಕಿದ್ದರು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಸಚಿವ ವಿ.ಸೋಮಣ್ಣ ಮತ ಶಿಕಾರಿ ನಡೆಸಿದ್ದಾರೆ. ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸೋಮಣ್ಣ ಅವರು ಮತಯಾಚನೆ ನಡೆಸಿದ್ದಾರೆ.
ಮತಯಾಚನೆ ವೇಳೆ ಬಾಲಕನೊಬ್ಬ ‘ಸಿಎಂ ಆಗೊಕೆ ಏನ್ ಮಾಡ್ಬೇಕು’ ಅಂತಾ ಸಚಿವ ವಿ.ಸೋಮಣ್ಣರನ್ನು ಪ್ರಶ್ನಿಸಿದ್ದಾನೆ. ಬಾಲಕನ ಪ್ರಶ್ನೆ ಕಂಡು ಅಚ್ಚರಿಗೊಂಡ ಸೋಮಣ್ಣ ಅವರು, ‘ನೀನೂ ಏನು ಮಾಡ್ಬೇಡ ಹೋಗಪ್ಪಾ ತಂದೆ, ಚೆನ್ನಾಗಿ ಓದು’ ಅಂತಾ ಬುದ್ದಿವಾದ ಹೇಳಿದ್ದಾರೆ.
ಇದನ್ನೂ ಓದಿ: Karnataka Election 2023: ರಾಜಕೀಯದಿಂದ ನನ್ನನ್ನು ದೂರಮಾಡಲು ಷಡ್ಯಂತ್ರ ನಡೆಯುತ್ತಿದೆ- ಡಿ.ಕೆ ಶಿವಕುಮಾರ್
‘ಸಿಎಂ, ಗಿಎಂ ಎಲ್ಲಾ ಲೆಕ್ಕ ಇಲ್ಲ ನೀನೆ ದೊಡ್ಡ ಸಿಎಂ. ಚೆನ್ನಾಗಿ ಓದು, ಸ್ಫೋರ್ಟ್ ಆಕ್ಟಿವಿಟಿಯಲ್ಲಿರು, ಬಾಕಿ ಎಲ್ಲಾ ಬಿಟ್ಬಿಡು. ನಿನ್ನ ಹಣೆಯಲ್ಲಿದ್ರೆ ರಾಜಕೀಯಕ್ಕೆ ಬರ್ತೀಯಾ ಹೋಗು’ ಎಂದು ಸೋಮಣ್ಣ ಹೇಳಿದ್ದಾರೆ.
ನನಗೆ ಪಾರ್ಟಿ ತಾಯಿ ಇದ್ದಂತೆ. ನೀನೊಬ್ಬ ಬದಲಾವಣೆಯಾಗು, ಬದಲಾವಣೆಯಾದಿಗದ್ರೆ ನಿಮಗೆ ನಷ್ಟವಾಗೋದು. ಒಳ್ಳೆಯದಕ್ಕೆ ನಾನು ಪ್ರಾಣ ಕೊಡ್ತೀನಿ. ಕೆಟ್ಟವರನ್ನು ಮಾತ್ರ ಬಿಡಲ್ಲ ಎಂದು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಸೋಮಣ್ಣ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: India population Report: ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಭಾರತ!
2006ರ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ. ಬರಿಮೈಯಲ್ಲಿ ದೇವಾಲಪುರದಿಂದ ಮೈಸೂರಿಗೆ ಹೋಗಿದ್ದೇನೆ. ನನ್ನ ಕಾರಿನ ಗ್ಲಾಸ್ ಒಡೆದಿದ್ದರು ಪ್ಯಾಂಟ್ ಹರಿದು ಹಾಕಿದ್ದರು. ಅವತ್ತು ನನ್ನ ಸಮಾಜ ಎದುರು ಹಾಕಿಕೊಂಡು ಅವರಿಗೋಸ್ಕರ ಕೆಲಸ ಮಾಡಿದ್ದೆ. ಇದೆಲ್ಲಾ ಸಿದ್ದರಾಮಯ್ಯ ಸಾಹೇಬರ ತಲೇಲಿಲ್ಲ ಎಂದು ಸೋಮಣ್ಣ ವಾಗ್ದಾಳಿ ನಡೆಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.