Karnataka Assembly Election 2023: ಬಹು ನಿರೀಕ್ಷಿತ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನೆರಡು ದಿನವಷ್ಟೇ ಬಾಕಿ ಉಳಿದಿದೆ. ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಇಂದಿನಿಂದ ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇದರ ಅಂಗವಾಗಿ ಮದ್ಯ ಮಾರಾಟ ರಹಿತ ದಿನವೆಂದು ಘೋಷಣೆ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

10 ಮೇ 2023ರಂದು  ರಾಜ್ಯದಲ್ಲಿ ಸಾರ್ವರ್ತಿಕ ಚುನಾವಣೆ ನಡೆಯುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮದ್ಯದಂಗಡಿಗಳನ್ನು ಬಂದ್ ಮಾಡಲು ಅಬಕಾರಿ ಇಲಾಖೆ ಸೂಚನೆ ನೀಡಿದೆ. 


ಇದನ್ನೂ ಓದಿ- "ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆ"-ಸಿದ್ದರಾಮಯ್ಯ


ಅಬಕಾರಿ ಇಲಾಖೆಯ ಸೂಚನೆಯ ಅನುಸಾರ ಇಂದು (ಮೇ 08) ಸಂಜೆ 5 ಗಂಟೆಯಿಂದ ಗುರುವಾರ (ಮೇ 11) ಬೆಳಿಗ್ಗೆ 6 ಗಂಟೆವರೆಗೆ ರಾಜ್ಯದಲ್ಲಿ ಮದ್ಯ ಮಾರಾಟವನ್ನು ನೀಷೇಧಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ ಚುನಾವಣಾ ಫಲಿತಾಂಶದ ಎಂದರೆ 13 ಮೇ 2023 ರಂದು  ಬೆಳಿಗ್ಗೆ 6 ಗಂಟೆಯಿಂದ ಮರುದಿನ ಎಂದರೆ 14 ಮೇ 2023ರ ಬೆಳಿಗ್ಗೆ  6 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎಂದು ಅಬಕಾರಿ ಇಲಾಖೆ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. 


ಇದಲ್ಲದೆ, ಕರ್ನಾಟಕದ ಗಡಿ ರಾಜ್ಯಗಳಾದ ಕೇರಳ, ಆಂಧ್ರಪ್ರದೇಶ, ಗೋವಾ, ತಮಿಳುನಾಡಿಗೂ ಈಗಾಗಲೇ ಡ್ರೈ ಡೇಗೆ ಸೂಚನೆ ನೀಡಲಾಗಿದೆ. ಈ ರಾಜ್ಯಗಳಲ್ಲೂ ಸಹ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್, ರಿಟೇಲ್ ಮಾರಾಟ ಮಳಿಗೆಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. 


ಇದನ್ನೂ ಓದಿ- Photos: ಬೆವರು ಸುರಿಸಿ ದುಡಿವ ಜನರಿಗೆ ಮಹತ್ವದ ಮತದಾನ ಜಾಗೃತಿ ಪಾಠ


ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಚುನಾವಣೆ ಮತದಾನ, ಮತ ಎಣಿಕೆ ದಿನಗಳಲ್ಲಿ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.