ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನರಿಗೆ ವಿದ್ಯುತ್ ಏರಿಕೆ ಬರೆ ಹಾಕಲಾಗಿದೆ. ಪ್ರತಿ ಯೂನಿಟ್‍ಗೆ 70 ಪೈಸೆ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕವಿವಿಆ) ಒಪ್ಪಿಗೆ ನೀಡಿದೆ.


COMMERCIAL BREAK
SCROLL TO CONTINUE READING

2023-24ನೇ ಆರ್ಥಿಕ ವರ್ಷದ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುಚ್ಛಕ್ತಿ ದರಗಳ ಪರಿಷ್ಕರಣೆಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅನುಮೋದಿಸಿದೆ.


ಇದನ್ನೂ ಓದಿ: Chakraborty Sulibele : ಅವಿದ್ಯಾವಂತರು ಹೆಚ್ಚಾಗಿ ಕಾಂಗ್ರೆಸ್‌ ಗೆ ಮತ ಹಾಕಿದ್ದಾರೆ - ಚಕ್ರವರ್ತಿ ಸೂಲಿಬೆಲೆ !


ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಪ್ರತಿಯೂನಿಟ್ ಮೇಲೆ 1.46 ರೂ. ಹೆಚ್ಚಳ ಮಾಡುವಂತೆ ಎಸ್ಕಾಂಗಳು ಬೇಡಿಕೆ ಸಲ್ಲಿಸಿದ್ದವು. ಹೊಸ ದರ ಜಾರಿ ಹಿನ್ನೆಲೆ ಗ್ರಾಹಕರ ಪ್ರತಿ ತಿಂಗಳ ಬಿಲ್‍ನಲ್ಲಿ ಶೇ.8.31ರಷ್ಟು ಹೆಚ್ಚಳವಾಗಲಿದೆ.


ಗ್ರಾಹಕರಿಗೆ ಹೊಸ ದರಗಳು ಏಪ್ರಿಲ್ 1ರಿಂದಲೇ ಜಾರಿಯಾಗಲಿವೆ. ಇದೀಗ ಹೆಚ್ಚಳ ಮಾಡಿರುವ ಒಟ್ಟಾರೆ 70 ಪೈಸೆಯಲ್ಲಿ ನಿಗದಿತ ಶುಲ್ಕ ಮತ್ತು ವಿದ್ಯುತ್ ಬಳಕೆ ಶುಲ್ಕ ಎರಡೂ ಸೇರಿದೆ ಎಂದು ಕೆಇಆರ್‍ಸಿ ತಿಳಿಸಿದೆ.


ಇದನ್ನೂ ಓದಿ: ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.