ಮಂಗಳೂರು: ರಾಜ್ಯದಲ್ಲಿ ಚುನಾವಣೆ ಮುಗಿದು ಫಲಿತಾಂಶ ಹೊರ ಬಂದಿದೆ. ಆದರೆ ಅದರ ಕಾವು ಮಾತ್ರ ಹಾಗೆ ಇದ್ದೆ ಇನ್ನು ಹಲವೆಡೆ ರಾಜಕೀಯ ನಾಯಕರ ಮನೆಗೆ ಹೋಗಿ ಸಂತ್ವಾನ , ಗೆದ್ದವರ ಮನೆ ಮುಂದೆ ಸಂಭ್ರಮಚಾರಣೆ ಇನ್ನು ನಿಂತ್ತಿಲ್ಲ. ಈ ಬಾರಿ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ 136 ಸೀಟ್ ಗಳಿಸಿ ಬಹುಮತ ಸಾಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಫಲಿತಾಂಶದಲ್ಲಿ ಹಿನ್ನಡೆ ಕಂಡಿದೆ.
ಇದನ್ನೂ ಓದಿ: Karnataka Assembly election: ಹಸ್ತದ ಗುರುತು ಹೇರ್ ಕಟಿಂಗ್ ಮಾಡಿಸಿಕೊಂಡ ಕೈ ಅಭಿಮಾನಿ
ಬಹುಮತ ಮತ ಪಡೆದ ಕಾಂಗ್ರೆಸ್ ಪಕ್ಷವು ಸಿಎಂ ಸ್ಥಾನಕ್ಕಾಗಿ ಸಭೆ ಜೋರು ನಡೆಯುತ್ತಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಫೊಷ್ಟರ್ ಒಂದು ಬಾರಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಜೊತೆಗೆ ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅಳವಡಿಸಲಾಗಿದೆ.ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಈ ಘ ಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕುರುಬ ಸಮುದಾಯ ಆಗ್ರಹ
‘ಬಿಜೆಪಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ.
ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ.ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.