ಯಾದಗಿರಿ: ಕಾಂಗ್ರೆಸ್ ಅಭ್ಯರ್ಥಿ,‌‌ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ ಕಾರು ಅಪಘಾತವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಕ್ಷೇತ್ರದ‌ ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಅವರು ಯಾದಗಿರಿಯಿಂದ ಕಲಬುರಗಿಗೆ ಹೋಗುವಾಗ ಈ ಘಟನೆ ನಡೆದಿದೆ. 


COMMERCIAL BREAK
SCROLL TO CONTINUE READING

ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ರಾತ್ರಿ 12:30ರ ಸುಮಾರಿಗೆ ಘಟನೆ ನಡೆದಿದೆ. ಅಪಘಾತದಲ್ಲಿ ಚಿಂಚನಸೂರ್ ಅವರ ಕಾಲು ಮತ್ತು ಮುಖಕ್ಕೆ ಗಾಯವಾಗಿದೆ. ರಸ್ತೆಯ ಮಧ್ಯೆ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ವಾಹನ ಸ್ಕೀಡ್ ಆಗಿದೆ. ವಾಹನ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಘಟನೆ ನಡೆದಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ 45 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾದ ಎನ್ಸಿಪಿ 


ಸ್ಥಳೀಯರ ಸಹಕಾರದಿಂದ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ಚಿಂಚನಸೂರ್ ಅವರನ್ನು ದಾಖಲಿಸಲಾಗಿದೆ. ಚಾಲಕ ಮತ್ತು ಗನ್‌ಮ್ಯಾನ್‌ಗೆ ಯಾವುದೇ ಗಾಯಗಳು ಆಗಿಲ್ಲ. ಗುರುಮಿಠಕಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಸಬೇಕಿತ್ತು.


ಯಾದಗಿರಿ ಜಿಲ್ಲೆ ಗುರುಮಿಠಕಲ್ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದರು. ಅಪಾರ ಬೆಂಬಲಿಗರು/ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆ ಮೂಲಕ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರು. ಕಾಲು ಮುಳೆ ಮುರಿತ ಹಿನ್ನೆಲೆ ಕೆಲವೇ ಕ್ಷಣಗಳಲ್ಲಿ ಬಾಬುರಾವ್ ಚಿಂಚನಸೂರ್ ಅವರು ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ. 


ಇದನ್ನೂ ಓದಿ: Election 2023: ಮಾಜಿ ಶಾಸಕರಾದ ರಘು ಆಚಾರ್, ದೊಡ್ಡಪ್ಪಗೌಡ ಪಾಟೀಲ್, ಗುರು ಪಾಟೀಲ್ JDS ಸೇರ್ಪಡೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.