ಸಮ್ಮಿಶ್ರ ಸರ್ಕಾರ ಪತನ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ

Karnataka CM: 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

Written by - Yashaswini V | Last Updated : May 17, 2023, 10:34 AM IST
  • ಸಿದ್ದರಾಮಯ್ಯ‌ಗೆ ಮುಳುವಾಗುತ್ತಾ ಸುಧಾಕರ್ ಬಾಂಬ್

    ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯ ಕುಮ್ಮಕ್ಕು ಎಂದು ಟ್ವೀಟ್‌

    ಹೈಕಮಾಂಡ್ ಸಭೆಯಲ್ಲಿ ಕುಮ್ಮಕ್ಕು ವಿಚಾರ ಚರ್ಚೆ ಸಾಧ್ಯತೆ
ಸಮ್ಮಿಶ್ರ ಸರ್ಕಾರ ಪತನ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ title=

Karnataka Next CM: 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ಅಧಿಕಾರದ ಚುಕ್ಕಾಣಿಯನ್ನು ನೀಡಿದ್ದಾರೆ. ಆದರೂ ಕೂಡ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಮಾತ್ರ ಇನ್ನೂ ಕೂಡ ಕುತೂಹಲಕಾರಿಯಾಗಿಯೇ ಉಳಿದಿದೆ. ಈ ಮಧ್ಯೆ,  ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸರಣಿ ಟ್ವೀಟ್ ಮೂಲಕ ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. 

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.


 
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ಇದನ್ನೂ ಓದಿ- Karnataka CM decision: ಸಿದ್ದರಾಮಯ್ಯ ಮತ್ತು ಡಿಕೆಶಿ ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಪ್ರತ್ಯೇಕ ಮಾತುಕತೆ

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.

ಇದನ್ನೂ ಓದಿ- ನಾನೂ ಕೂಡ ಸಿಎಂ ಆಕಾಂಕ್ಷಿ: ಹೊಸ ಬಾಂಬ್ ಸಿಡಿಸಿದ ಡಾ. ಜಿ. ಪರಮೇಶ್ವರ್

ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಮಾಜಿ ಸಚಿವರಾದ ಡಾ. ಕೆ. ಸುಧಾಕರ್ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.  

ಇದೀಗ ಇಂದು ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರಲ್ಲಿ ಯಾರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಬೇಕು ಎಂಬ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದು ಕುಮ್ಮಕ್ಕು ಎಂಬ ಸುಧಾಕರ್ ಅವರ ಟ್ವೀಟ್ ಸದ್ದು ಮಾಡುವ ಸಾಧ್ಯತೆ ಇದೆ. ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರ ಈ ಟ್ವೀಟ್ ಸಿದ್ದರಾಮಯ್ಯ ಸಿಎಂ ಆಸೆಗೆ ತಣ್ಣೀರು ಎರಚುತ್ತಾ? ಸುಧಾಕರ್‌ ಟ್ವೀಟ್‌ ಕನಕಪುರ ಬಂಡೆಗೆ ವರದಾನ ಆಗುತ್ತಾ ಎಂಬುದನ್ನೂ ಕಾದುನೋಡಬೇಕಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News