ಬೆಂಗಳೂರು: ಬಿಜೆಪಿ ಪರಿವಾರವಾದದ ಬಗ್ಗೆ ಮಾತನಾಡುತ್ತಾರೆ. ರಾಜೀವ್ ಗಾಂಧಿ ಅವರ ನಂತರ ಸುದೀರ್ಘ 34 ವರ್ಷಗಳ ಕಾಲ ಗಾಂಧಿ ಕುಟುಂಬದ ಯಾವುದೇ ಸದಸ್ಯರು ಸರ್ಕಾರದ ಭಾಗವಾಗಿರಲಿಲ್ಲ. ಆದರೂ ಬಿಜೆಪಿ ಯಾವ ಪರಿವಾರದ ಬಗ್ಗೆ ಮಾತನಾಡುತ್ತಿದ್ದಾರೆ? ನರಸಿಂಹರಾವ್, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದರು. ಇನ್ನು ಗಾಂಧಿ ಕುಟುಂಬದವರು ಎಂದಿಗೂ ವಿರೋಧ ಪಕ್ಷದ ನಾಯಕ ಸ್ಥಾನವನ್ನೂ ಅಲಂಕರಿಸಿರಲಿಲ್ಲ. ಬೊಮ್ಮಾಯಿ ಅವರದ್ದು ಪರಿವಾರ ರಾಜಕಾರಣವಲ್ಲವೇ? ಯಡಿಯೂರಪ್ಪ ಅವರ ಪುತ್ರರಿಗೆ ಟಿಕೆಟ್ ನೀಡುವುದು ಪರಿವಾರವಾದವಲ್ಲವೇ? ಈ ಚುನಾವಣೆಯಲ್ಲಿ ಬಿಜೆಪಿ ಕುಟುಂಬದ 36 ಜನರಿಗೆ ಟಿಕೆಟ್ ನೀಡಿದ್ದಾರೆ. ಆದರೂ ಕಾಂಗ್ರೆಸ್ ವಿರುದ್ಧ ಪರಿವಾರವಾದದ ಬಗ್ಗೆ ಮಾತನಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.


COMMERCIAL BREAK
SCROLL TO CONTINUE READING

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ್ದಿಷ್ಟು...


ಕರ್ನಾಟಕ ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಭ್ರಷ್ಟ ಸರ್ಕಾರವನ್ನು ಬಡಿದೋಡಿಸಿ, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಕರ್ನಾಟಕ ರಾಜ್ಯದ ಜನರ ಮುಂದೆ ಅವಕಾಶ ಎದುರಾಗಿದೆ. ಕಳೆದ ಬಾರಿ ಬಿಜೆಪಿ ನಮ್ಮ ಶಾಸಕರನ್ನು ಖರೀದಿ ಮಾಡಿ ಸರ್ಕಾರ ಬೀಳಿಸಿತ್ತು. ಹೀಗಾಗಿ ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಲಿದ್ದಾರೆ. 


ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎದ್ದಿದ್ದು, ಕಾಂಗ್ರೆಸ್ ಪ್ರಚಂಡ ಬಹುಮತ ಪಡೆಯುವ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದಿದ್ದು, ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ನಾವು ಹಿಮಾಚಲ ಪ್ರದೇಶದಲ್ಲೂ ಸಾಕಷ್ಟು ಯೋಜನೆ ಘೋಷಣೆ ಮಾಡಿದ್ದು, ಅವುಗಳನ್ನು ಜಾರಿ ಮಾಡುತ್ತಿದ್ದೇವೆ. ಹಳೇ ಪಿಂಚಣಿ ವ್ಯವಸ್ಥೆ ಜಾರಿ, ಮಹಿಳೆಯರಿಗೆ 1500 ರೂ. ಉಚಿತ ವಿದ್ಯುತ್, ರೈತರಿಗೆ ಬೆಂಬಲ ಬೆಲೆ ಕುರಿತ ಭರವಸೆಯನ್ನು ಹಿಮಾಚಲ ಪ್ರದೇಶದಲ್ಲಿ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.  


ಇದನ್ನೂ ಓದಿ: ಚುನಾವಣೆ ಗೆಲ್ಲೋದಷ್ಟೇ ಗುರಿ ಎಂದ ಪ್ರಲ್ಹಾದ್‌ ಜೋಶಿ


ಮಧ್ಯಪ್ರದೇಶ, ಛತ್ತೀಸಗಡ, ರಾಜಸ್ಥಾನ ರಾಜ್ಯಗಳಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಭರವಸೆಯನ್ನು ತಕ್ಷಣವೇ ಜಾರಿ ಮಾಡಿದೆ. ಬಿಜೆಪಿ ಯಾವ ಒಂದು ಯೋಜನೆ ಜಾರಿ ಮಾಡಿದೆ ಎಂದು ಉದಾಹರಣೆ ನೀಡಿ. ನರೇಗಾ, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಯೋಜನೆ ನೀಡಿದೆ. ಬಿಜೆಪಿ ಸರ್ಕಾರ 2014ರಿಂದ ಯಾವುದೇ ಒಂದು ಜನಪರ ಯೋಜನೆ ನೀಡಿಲ್ಲ. ಬಿಜೆಪಿ ನಿಮ್ಮ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿತ್ತು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ ಬಿಜೆಪಿ 9 ವರ್ಷಗಳಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ 18 ಲಕ್ಷ ಉದ್ಯೋಗ ನೀಡಿಲ್ಲ. ನಮ್ಮ ಸರ್ಕಾರ ಬಂದರೆ ಪೆಟ್ರೋಲ್ 50 ರೂ.ಗೆ, ಡೀಸೆಲ್ 40 ರೂ.ಗೆ ನೀಡುತ್ತೇವೆ ಎಂದರು. 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ನಿರ್ಮಿಸುವುದಾಗಿ ಹೇಳಿದ್ದರು. ರೈತರಾ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದರು. ಹೀಗೆ ಪ್ರತಿ ಹಂತದಲ್ಲಿ ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.


ಅವರು ಚುನಾವಣೆ ಸಮಯದಲ್ಲಿ ಈ ಬಗ್ಗೆ ಮಾತನಾಡುತ್ತಾರೆ. ಅಧಿಕಾರಕ್ಕೆ ಬಂದ ನಂತರ ಅವುಗಳನ್ನು ಮರೆಯುತ್ತಾರೆ. ನಿನ್ನೆ ಬಿಜೆಪಿ ಪ್ರಮುಖ ನಾಯಕರ ಮಾತು ಕೇಳುತ್ತಿದ್ದೆ. ನಿಮಗೆ ಮೋದಿ ಅವರ ಆಶೀರ್ವಾದ ಬೇಕು ಎಂದರೆ ಬಿಜೆಪಿಗೆ ಮತ ಹಾಕಿ ಎಂದು ಹೇಳುತ್ತಾರೆ. ಅವರೇನು ದೇವರೇ? ನಿಮ್ಮ ಬಳಿ ರಾಜ್ಯದ ಯಾವುದೇ ನಾಯಕರಿಲ್ಲವೇ? ಮೋದಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ಮಾಡುತ್ತಾರಾ? ಅವರು ರಾಜ್ಯದ ಯಾವುದೇ ನಾಯಕರ ಬಗ್ಗೆ ಮಾತನಾಡುತ್ತಿಲ್ಲ. ಮೋದಿ ಹೆಸರು ಹೇಳುತ್ತಾ ಬೆದರಿಕೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಕನ್ನಡಿಗರಿಗೆ ಮಾಡಬಹುದಾದ ಅಪಮಾನ. ಹೀಗಾಗಿ ಅವರು ಕ್ಷಮೆ ಕೇಳಬೇಕು.


ಹಿಮಾಚಲ ಪ್ರದೇಶದಲ್ಲೂ ಬಿಜೆಪಿ ಚುನಾವಣೆಯನ್ನು ಮೋದಿ ವರ್ಸಸ್ ಕಾಂಗ್ರೆಸ್ ಎಂಬಂತೆ ಪ್ರಚಾರ ಮಾಡಿತು. ನಂತರ ಮೋದಿ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ ನಂತರ ಇದನ್ನು ನಿಲ್ಲಿಸಿದರು. ನಂತರ ಅವರ ಕೆಟ್ಟದಾಗಿ ಸೋತು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತು. ಅದೇ ರೀತಿ ರಾಜ್ಯದಲ್ಲೂ ಆಗಲಿದೆ. 


ಹಿಮಾಚಲ ಪ್ರದೇಶದಂತೆ ರಾಜ್ಯದಲ್ಲೂ ಬಿಜೆಪಿ ಬಂಡಾಯ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಬಿಜೆಪಿ ಸೋಲುವುದು ಖಚಿತವಾಗಿದೆ. 


ಇನ್ನು ರಾಜ್ಯದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಾದರೆ, ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1.50 ಲಕ್ಷ ಕೋಟಿ ಲೂಟಿ ಮಾಡಲಾಗಿದೆ. ಈ ಸರ್ಕಾರ ಟೆಂಡರ್ ಹಗರಣ, ಪಿಎಸ್ಐ ನೇಮಕಾತಿ, ಭಊ ಕಬಳಿಕೆ ಹಗರಣ, ಕೋವಿಡ್ ಹಗರಣ, ವಿಜೇಂದ್ರ ಹಗರಣ, ಮೊಟ್ಟೆ ಹಗರಣ, ಫಉಡ್ ಕಿಟ್ ಹಗರಣ, ಬಿಟ್ ಕಾಯಿನ್ ಹಗರಣ, ಸಿಡಿ ಹಗರಣ, ಬೆಡ್ ಹಗರಣ, ಬ್ಯಾಂಕ್ ಸಾಲ ಹಗರಣ, ರಾಘವೇಂದ್ರ ಬ್ಯಾಂಕ್ ಹಗರಣ, ಬಿಡಿಎ ಹಗರಣ ನಡೆಸಿದೆ. 


ಇದನ್ನೂ ಓದಿ: Karnataka Election 2023 : ಜಗಳೂರಿನಲ್ಲಿ ಬಾದ್ ಶಾ ಸುದೀಪ್ ಭರ್ಜರಿ ರೋಡ್ ಶೋ, ಬಿಜೆಪಿ ಪರ ಮತಬೇಟೆ


ಮತ್ತೊಂಡೆದೆ ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ 4 ಗ್ಯಾರಂಟಿ ಯೋಜನೆ ನೀಡುತ್ತಿದ್ದು, ಪ್ರತಿ ವರ್ಷ ಇದಕ್ಕಾಗಿ 50 ಸಾವಿರ ಕೋಟಿ ಹಣ ನೀಡಲಿದೆ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮೀ ಯೋಜನೆ ಮೂಲಕ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ, ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಉಚಿತ, ಯುವನಿಧಿ ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗೆ ಪ್ರತಿ ತಿಂಗಳು 3 ಸಾವಿರ, ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. 


ಬಿಜೆಪಿ ಸರ್ಕಾರ ಬಟ್ಟೆ ಬದಲಿಸುವಂತೆ ಮುಖ್ಯಮಂತ್ರಿಗಳನ್ನು ಬದಲಿಸುತ್ತಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸರ್ಕಾರವನ್ನು ನಡೆಸುವ ಕ್ರಮವಲ್ಲ. ಹೀಗಾಗಿ ರಾಜ್ಯದ ಜನ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.