Haveri Assembly Election Result 2023: ಏಲಕ್ಕಿ ಕಂಪಿನ ನಾಡು ಹಾವೇರಿ ಜಿಲ್ಲೆ ‘ಹಸ್ತ’ಮಯ!
Haveri Assembly Election Result 2023: ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಮುಖಭಂಗ ಉಂಟಾಗಿದೆ. 2018ರ ಚುನಾವಣೆಯಲ್ಲಿ ಒಟ್ಟು 6 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.
ಹಾವೇರಿ: ಏಲಕ್ಕಿ ಕಂಪಿನ ನಾಡು ಹಾವೇರಿ ಜಿಲ್ಲೆ ಹಸ್ತಮಯವಾಗಿದೆ. ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳು ‘ಕೈ’ ತೆಕ್ಕೆಗೆ ಸೇರಿವೆ. ಸಿಎಂ ಬಸವರಾಜ ಬೊಮ್ಮಾಯಿ ಕ್ಷೇತ್ರ ಶಿಗ್ಗಾಂವಿ ಬಿಟ್ಟು ಉಳಿದ 5 ಕ್ಷೇತ್ರದಲ್ಲಿ ಜನರು ‘ಕೈ’ ಹಿಡಿದಿದ್ದಾರೆ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗ ಉಂಟಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಒಟ್ಟು 6 ವಿಧಾನಸಭಾ ಕ್ಷೇತ್ರಗಳಿವೆ. ಹಾವೇರಿ ಮೀಸಲು ಕ್ಷೇತ್ರ, ಹಾನಗಲ್, ರಾಣೆಬೆನ್ನೂರು, ಬ್ಯಾಡಗಿ, ಹಿರೇಕೆರೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳನ್ನು ಹಾವೇರಿ ಹೊಂದಿದೆ. ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಮುಖಭಂಗ ಉಂಟಾಗಿದೆ. 2018ರ ಚುನಾವಣೆಯಲ್ಲಿ ಒಟ್ಟು 6 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.
ಇದನ್ನೂ ಓದಿ: Karnataka Election Results 2023: ಕರ್ನಾಟಕ ಚುನಾವಣೆ ಮೇಲೆ BSY ಮೊದಲ ಪ್ರತಿಕ್ರಿಯೆ, ಹೇಳಿದ್ದೇನು?
ಹಾವೇರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ವಿವರ:
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರ – ಬಿಜೆಪಿ – ಬಸವರಾಜ ಬೊಮ್ಮಾಯಿ
ಹಾವೇರಿ ಮೀಸಲು ವಿಧಾನಸಭೆ ಕ್ಷೇತ್ರ- ಕಾಂಗ್ರೆಸ್ - ರುದ್ರಪ್ಪ ಲಮಾಣಿ
ಬ್ಯಾಡಗಿ ವಿಧಾನಸಭೆ ಕ್ಷೇತ್ರ – ಕಾಂಗ್ರೆಸ್ - ಬಸವರಾಜ್ ಶಿವಣ್ಣನವರ
ಹಿರೇಕೆರೂರು ವಿಧಾನಸಭೆ ಕ್ಷೇತ್ರ – ಕಾಂಗ್ರೆಸ್ - ಯುಬಿ ಬಣಕಾರ
ರಾಣೇಬೆನ್ನೂರು ವಿಧಾನಸಭೆ ಕ್ಷೇತ್ರ - ಕಾಂಗ್ರೆಸ್ - ಪ್ರಕಾಶ ಕೋಳಿವಾಡ
ಹಾನಗಲ್ ವಿಧಾನಸಭೆ ಕ್ಷೇತ್ರ – ಕಾಂಗ್ರೆಸ್ - ಶ್ರೀನಿವಾಸ್ ಮಾನೆ
ಮೇ 10ರಂದು ಬುಧವಾರ ನಡೆದ ಮತದಾನದ ವೇಳೆ ಹಾವೇರಿಯಲ್ಲಿ ಶೇ.81.17ರಷ್ಟು ಮತದಾನವಾಗಿತ್ತು. 6 ವಿಧಾನಸಭಾ ಕ್ಷೇತ್ರಗಳ ಪೈಕಿ ಹಿರೇಕೆರೂರು ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ ಶೇ.84.89ರಷ್ಟು ಮತದಾನವಾಗಿತ್ತು.
ಇದನ್ನೂ ಓದಿ: ಸೋಮಣ್ಣ ಕೈಯಲ್ಲೂ ಆಗದ ಪುಟ್ಟರಂಗಶೆಟ್ಟಿ ಸೋಲು... ಕೈ ಭದ್ರ- ಕಮಲ ಛಿದ್ರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.