ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಬಿಜೆಪಿಯಿಂದ ಹೊಸ ಸುಳ್ಳಿನ ಕಥೆ ಸೃಷ್ಟಿ: ಎಚ್‍ಡಿಕೆ ಆಕ್ರೋಶ
ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ‘ಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
#ಒಕ್ಕಲಿಗರ_ಮೆಲೆ_ಬಿಜೆಪಿ_ವಕ್ರದೃಷ್ಟಿ ಹ್ಯಾಶ್‍ಟ್ಯಾಗ್ ಬಳಸಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ಮೋದಿಯವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ’ವೆಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಾಕಷ್ಟು ನಿಗೂಢವಾಯ್ತು ವಿ. ಸೋಮಣ್ಣನ ನಡೆ...!
ಐಪಿಎಸ್ ಅಧಿಕಾರಿ ಸೋಗಿನಲ್ಲಿ 1.75 ಕೋಟಿ ವಂಚಿಸಿದ ನಕಲಿ ಎಸ್ಪಿ..!
‘ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ; ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜೊತೆ ಚಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ’ ಎಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.