CRPF ಪರೀಕ್ಷೆ: ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ- ಎಚ್‍ಡಿಕೆ ಆಕ್ರೋಶ
CRPF Recruitment 2023: ಕೇಂದ್ರೀಯ ಮೀಸಲು ಪಡೆ ಪರೀಕ್ಷೆ(CRPF)ಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. #ಕನ್ನಡ_ನಿರ್ಲಕ್ಷ್ಯ_ಬಿಜೆಪಿಯ_ವರಸೆ #CrpfExam ಹ್ಯಾಶ್‍ಟ್ಯಾಗ್ ಬಳಸಿ ಎಚ್‍ಡಿಕೆ ಸೋಮವಾರ ಸರಣಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಕೇಂದ್ರೀಯ ಮೀಸಲು ಪಡೆ ಪರೀಕ್ಷೆ(CRPF)ಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. #ಕನ್ನಡ_ನಿರ್ಲಕ್ಷ್ಯ_ಬಿಜೆಪಿಯ_ವರಸೆ #CrpfExam ಹ್ಯಾಶ್‍ಟ್ಯಾಗ್ ಬಳಸಿ ಎಚ್‍ಡಿಕೆ ಸೋಮವಾರ ಸರಣಿ ಟ್ವೀಟ್ ಮಾಡಿದ್ದಾರೆ.
‘ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕನ್ನಡದಲ್ಲಿಯೂ CRPF ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ: ಸಿದ್ದರಾಮಯ್ಯ ಆಗ್ರಹ
‘9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ,ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ’ ಅಂತಾ ಎಚ್‍ಡಿಕೆ ಕಿಡಿಕಾರಿದ್ದಾರೆ.
‘ಕೇಂದ್ರ ಸರ್ಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ’ವೆಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
"ಸರ್ಕಾರದ ಹಣದಲ್ಲಿ ಬಿಜೆಪಿಯ ಜಾತ್ರೆ"- ಕಾಂಗ್ರೆಸ್ ಟೀಕೆ
ಕೇಂದ್ರ ಸರ್ಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ’ ಎಂದು ಎಚ್‍ಡಿಕೆ ಕಿಡಿಕಾರಿದ್ದಾರೆ.
‘ಮುಲಾಜಿಲ್ಲದೆ ಸಿಆರ್‍ಪಿಎಫ್ ನೇಮಕಾತಿಯ ಮರುಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲಾ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು’ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.