ಬೆಂಗಳೂರು: ‘ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ’ವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ’ ಎಂದು ಹೇಳಿದ್ದಾರೆ.


ಕಿರಾಣಿ ಅಂಗಡಿಗಳು ನೀಡುವ ಸೇವೆ ಮಾಲ್’ಗಳು ನೀಡುವುದಿಲ್ಲ: ಸಿಎಂ ಬೊಮ್ಮಾಯಿ


‘ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತ. ಈ ಎಕ್ಸ್ ಪ್ರೆಸ್ ಹೆದ್ದಾರಿಯ ನಿಜವಾದ ಹಕ್ಕುದಾರರಾದ ರಾಮನಗರ, ಮಂಡ್ಯ ಜನರನ್ನು ಪರಾವಲಂಭಿಗಳನ್ನಾಗಿ ಮಾಡಿದ್ದಲ್ಲದೆ, ಭೂಮಿ ಕಳೆದುಕೊಂಡ ಬಡ ರೈತರು ಹೆದ್ದಾರಿ ಬದಿ ನಿಂತು ಭಿಕ್ಷೆ ಬೇಡುವಂಥ ದುಃಸ್ಥಿತಿಯನ್ನು ಕೇಂದ್ರ ಸರಕಾರ ಸೃಷ್ಟಿಸಿದೆ’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.


ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ವಿಶ್ರಮಿಸುವುದಿಲ್ಲ : ಸಿಎಂ ಬೊಮ್ಮಾಯಿ‌


ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ