ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ: ಎಚ್‍ಡಿಕೆ
ಈ ಕಾಂಗ್ರೆಸ್ ಮಹಾತ್ಮ ಗಾಂಧೀಜಿಯವರ ಕಾಲದ ಕಾಂಗ್ರೆಸ್ ಅಲ್ಲ, ಅಧಿಕಾರಕ್ಕಾಗಿ ಎಲ್ಲ ಅಡ್ಡದಾರಿ ಹಿಡಿದ ಪಕ್ಷ ಈ ಕಾಂಗ್ರೆಸ್, ಕಾಲಚಕ್ರಕ್ಕೆ ಸಿಲುಕಿ ಕೊರಗುತ್ತಾ ನೀತಿಗೆಟ್ಟ, ಲಜ್ಜೆಗೆಟ್ಟ, ಮತಿಗೆಟ್ಟ ಕಾಂಗ್ರೆಸ್ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೈ ಕೊಡುವ ಚಾಳಿ ಕಾಂಗ್ರೆಸ್ ಜನ್ಮಕ್ಕೆ ಅಂಟಿದ ಆಜನ್ಮ ಜಾಡ್ಯ. ಒಳಗೊಂದು ಮುಖ, ಹೊರಗೊಂದು ಮುಖವುಳ್ಳ ಮುಖೇಡಿ ಪಕ್ಷವೇ ಕಾಂಗ್ರೆಸ್. ಅಂಥ ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ!!’ ಎಂದು ಕುಟುಕಿದ್ದಾರೆ.
‘ಪ್ರಧಾನಿಯಾಗಿದ್ದ ಕನ್ನಡದ ಹೆಮ್ಮೆಯ ಪುತ್ರನನ್ನು ಕೆಳಗೆಳೆದ ಕಿರಾತಕ ಪಕ್ಷ, ಜಾತ್ಯತೀತತೆ ಎನ್ನುತ್ತಲೇ ಜಾತಿಗಳ ನಡುವೆ ಕಿಚ್ಚಿಟ್ಟ ಸೋಗಲಾಡಿ ಪಕ್ಷ, ಅಹಿಂದ ಎನ್ನುತ್ತಲೇ ಬಿಜೆಪಿ ಹಿಂದೆಬಿದ್ದು ಬೇಳೆ ಬೇಯಿಸಿಕೊಳ್ಳುತ್ತಿರುವ ಪಕ್ಷ; ಅಂಥ ಕಳಂಕಿತ ಪಕ್ಷ ಜಾತ್ಯತೀತ ಜನತಾದಳದ ಜಾತ್ಯತೀತತೆ ಬಗ್ಗೆ ಕೀರಲು ದನಿಯಲ್ಲಿ ಕಿರುಚುತ್ತಿದೆ. ಇಡೀ ದೇಶದ ಉದ್ದಗಲಕ್ಕೂ ಜಾತ್ಯತೀತ ಪಕ್ಷಗಳ ಮಾರಣಹೋಮ ನಡೆಸಿ, ಈಗ ಅಳಿವು ಉಳಿವಿಗಾಗಿ ಅದೇ ಪ್ರಾದೇಶಿಕ ಪಕ್ಷಗಳ ಬಾಲವಾಗಿ ಉಸಿರಾಡುತ್ತಿದೆ ಕಾಂಗ್ರೆಸ್. ಇನ್ನೂ ಹಳೆಯ ಅಮಲಿನಲ್ಲಿಯೇ ತೇಲುತ್ತಿದೆ ಆ ಪಕ್ಷಕ್ಕೆ ವರ್ತಮಾನದ ವರ್ತನೆಯ ಅರಿವೇ ಇಲ್ಲ’ವೆಂದು ಎಚ್‍ಡಿಕೆ ಕಿಡಿಕಾರಿದ್ದಾರೆ.
ZEE NEWS-MATRIZE Opinion Poll: ಕರ್ನಾಟಕದಲ್ಲಿ ಮತ್ತೊಮ್ಮೆ ಅತಂತ್ರ ಸರ್ಕಾರ ..!
‘ಭ್ರಷ್ಟ ಬಿಜೆಪಿ ವಿರುದ್ಧ ಸರಣಿ ದಾಖಲೆಗಳನ್ನೇ ಇಟ್ಟ ಜೆಡಿಎಸ್, ಬಿಜೆಪಿ ಅಧಿಕಾರಸ್ಥರ ಸರಣಿಜೈಲು ಪರೇಡ್‍ಗೆ ಕಾರಣವಾಗಿದ್ದು ಇತಿಹಾಸ. ಆಗ ಕಾಂಗ್ರೆಸ್ ಎಲ್ಲಿತ್ತು? ಅಂದು ಬಿಜೆಪಿ ಜೊತೆ ಅಡ್ಜಸ್ಟ್ ಆಗಿದ್ದು ಸುಳ್ಳೇ? ಕದ್ದು, ಕಣ್ಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ಲವೇ? ಕಳ್ಳಬೆಕ್ಕಿನ ಕಥೆ ಬೇರೆ ಬಿಡಿಸಿ ಹೇಳಬೇಕೆ? ಜಗತ್ತಿಗೆ ಮಾದರಿಯಾದ ಭಾರತದ ಪ್ರಜಾಪ್ರಭುತ್ವಕ್ಕೆ ಶಾಶ್ವತ ಕಳಂಕ ಮೆತ್ತಿದ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮಹೋನ್ನತ ಆಶಯಕ್ಕೆ ಕುಣಿಕೆ ಬಿಗಿದ ‘ಆಪರೇಶನ್ ಕಮಲ’ ಎಂಬ ಬಿಜೆಪಿಯ ಅಸಹ್ಯದಲ್ಲಿ ಅಭ್ಯಂಜನ ಮಾಡಿದವರು ಯಾರಯ್ಯ?’ ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.
ಬಿಜೆಪಿ-ಕಾಂಗ್ರೆಸ್ ಭಾಯಿ ಭಾಯಿ; ಇದೇ ಸತ್ಯ. ಅಲ್ಲ ಎನ್ನುವ ಅಚಲ ನೈತಿಕತೆ ಆ ಪಕ್ಷಕ್ಕೆ ಇದೆಯಾ?’ ಎಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.
ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿದ ಚುನಾವಣಾ ಆಯೋಗ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.