Vote Counting Centre: ರಾಜಧಾನಿಯ ಮತ ಎಣಿಕೆ ಕೇಂದ್ರಗಳ ಬಳಿ ಹೈ ಸೆಕ್ಯೂರಿಟಿ : ನಿಮ್ಮ ಕ್ಷೇತ್ರದ ಮತ ಎಣಿಕೆ ಎಲ್ಲೆಲ್ಲಿ ಗೊತ್ತಾ..!?

Vote Counting Centre: ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ.

Written by - Zee Kannada News Desk | Last Updated : May 8, 2023, 05:56 PM IST
  • ರಾಜಧಾನಿ ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಮತ ಎಣಿಕೆ
  • ಮೇ. 13 ರಂದು ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ
  • ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್ ಗಳ ವ್ಯವಸ್ಥೆ
Vote Counting Centre: ರಾಜಧಾನಿಯ ಮತ ಎಣಿಕೆ ಕೇಂದ್ರಗಳ ಬಳಿ ಹೈ ಸೆಕ್ಯೂರಿಟಿ : ನಿಮ್ಮ ಕ್ಷೇತ್ರದ ಮತ ಎಣಿಕೆ ಎಲ್ಲೆಲ್ಲಿ ಗೊತ್ತಾ..!? title=

ಬೆಂಗಳೂರು: ರಾಜಧಾನಿ ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಮತ ಎಣಿಕೆ ಕಾರ್ಯವು 4 ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಈ ಪೈಕಿ ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.

ನಗರದಲ್ಲಿರುವ ಸೆಂ. ಜೋಸೆಫ್ ಇಂಡಿಯನ್ ಹೈ ಸ್ಕೂಲ್ ನಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ.

ಇದನ್ನೂ ಓದಿ: The Final Election Campaign: ಲಿಂಗಾಯತ ವೇದಿಕೆ ಅನ್ನೊದು ಎಲ್ಲಿಯೂ ಇಲ್ಲ, ಅದು ಒಂದು ಕಾಲ್ಪನಿಕ ಸಂಘಟನೆ- ಬಸವರಾಜ ಬೊಮ್ಮಾಯಿ

ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಅದರಲ್ಲಿ 2 ಟೇಬಲ್ ಗಳನ್ನು ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿಡಲಾಗಿರುತ್ತದೆ ಎಂದು ಹೇಳಿದರು.

ಬೆಂಗಳೂರು ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಡಾ. ದಯಾನಂದ್ ರವರು ಮಾತನಾಡಿ, ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ. 13 ರಂದು ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ಟೇಬಲ್ ಗಳಿಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆಯಿರುತ್ತದೆ. ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಈಗಾಗಲೇ ತರಬೇತಿಯನ್ನು ಸಹಾ ನೀಡಲಾಗಿದೆ.

ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ: ವಿವರ ಹೀಗಿದೆ ನೋಡಿ..

ಮೇ 12 ರಂದು, ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಮತ್ತೊಂದು ಬಾರಿ ತರಬೇತಿಯನ್ನು ನೀಡಲಾಗುವುದು. ಎಲ್ಲಾ ಕಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿದ್ದು, ಮೂರು ಹಂತದದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ಆವರಣದಲ್ಲಿ ಪಾರ್ಕಿಂಗ್ ವ್ಯಸವ್ಥೆ ಮಾಡಲಾಗಿದೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಯಲಹಂಕ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದರಿಂದ 2 ಬ್ಯಾಲೇಟ್ ಯುನಿಟ್ ಗಳು ಬರಲಿವೆ. ಉಳಿದ ವಿಧಾನಸಭಾ ಕ್ಷೇತ್ರಗಳಿಗೆ 1 ಬ್ಯಾಲೇಟ್ ಯುನಿಟ್ ಗಳು ಬರಲಿವೆ ಎಂದು ತಿಳಿಸಿದರು.

ಇದನ್ನೂ ಓದಿ: Election Campaign: ಸಿಲಿಕಾನ್‌ ಸಿಟಿ ಜನ ಸಾಮಾನ್ಯರ ಜೊತೆ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಹೇಗಿದ್ರು ನೋಡಿ! ಇಲ್ಲಿವೆ ಪೋಟೊಸ್..

ಮತ ಎಣಿಕೆ ಕೇಂದ್ರಗಳ ವಿವರ:

ಬೆಂಗಳೂರು ಕೇಂದ್ರ: ಬಿಎಂಎಸ್ ಕಾಲೇಜು, ಬೂಗಲ್ ರಾಕ್ ರಸ್ತೆ, ಗಾಂಧಿ ಬಜಾರ್, ಬಸವನಗುಡಿ, ಬೆಂಗಳೂರು.

ಬೆಂಗಳೂರು ದಕ್ಷಿಣ: ಎಸ್.ಎಸ್.ಎಂ.ಆರ್.ವಿ ಪಿಯು ಕಾಲೇಜು, 26ನೇ ಮುಖ್ಯ ರಸ್ತೆ, 4ನೇ ಬ್ಲಾಕ್, ಜಯನಗರ, ಬೆಂಗಳೂರು.

ಬೆಂಗಳೂರು ಉತ್ತರ: ಮೌಂಟ್ ಕಾರ್ಮಲ್ ಕಾಲೇಜು, ಪ್ಯಾಲೆಸ್ ರಸ್ತೆ, ವಸಂತನಗರ, ಬೆಂಗಳೂರು.

ಬೆಂಗಳೂರು ನಗರ: ಸೆಂ. ಜೋಸೆಫ್ ಇಂಡಿಯನ್ ಹೈ ಸ್ಕೂಲ್, ವಿಟ್ಟಲ್ ಮಲ್ಯ ರಸ್ತೆ, ಬೆಂಗಳೂರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News