Karnataka Assembly Election: ಬಿಜೆಪಿ ಪ್ರಜಾ ಪ್ರಣಾಳಿಕೆಯ ಮುಖ್ಯಾಂಶಗಳು
Karnataka Assembly Election: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಿ, ಜೊತೆಗೆ ತಜ್ಞರ ಅಭಿಪ್ರಾಯವನ್ನು ಪಡೆದು ಈ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದೆ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ
Karnataka Assembly Election: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಿ, ಜೊತೆಗೆ ತಜ್ಞರ ಅಭಿಪ್ರಾಯವನ್ನು ಪಡೆದು ಈ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಿಜೆಪಿ ಪ್ರಣಾಳಿಕೆಯನ್ನು "ಪ್ರಜಾ ಪ್ರಣಾಳಿಕೆ" ಎಂದು ಬಣ್ಣಿಸಿದ್ದಾರೆ.
ಸಮೃದ್ಧ ಕರ್ನಾಟಕಕ್ಕಾಗಿ ರಾಜ್ಯದ ಜನತೆಯಿಂದಲೇ, ರಾಜ್ಯದ ಜನತೆಗಾಗಿ, ರಾಜ್ಯದ ಜನತೆಗೋಸ್ಕರ ಅವರ ಸಲಹೆಗಳ ಆಧಾರದಲ್ಲಿ ರೂಪಿಸಲಾದ ‘ಬಿಜೆಪಿ ಪ್ರಜಾ ಪ್ರಣಾಳಿಕೆ 2023’ ಎಂದು ಬಣ್ಣಿಸಿರುವ ಬಿಜೆಪಿ, ಬಡವರ ಕಲ್ಯಾಣಕ್ಕಾಗಿ ಹೆಚ್ಚು ಒತ್ತು ನೀಡಿದ್ದೀವಿ. 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ನೀಡುತ್ತೇವೆ. ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು. ಯುಗಾದಿ.. ಗಣೇಶ.. ದೀಪಾವಳಿ ಹಬ್ಬಕ್ಕೆ ಉಚಿತ ಗ್ಯಾಸ್ ಹೀಗೆ ಹಲವು ಭರವಸೆಗಳನ್ನು ನೀಡಿದೆ.
3 ಫ್ರೀ ಸಿಲಿಂಡರ್, ನಿತ್ಯ ಅರ್ಧ ಲೀಟರ್ ಹಾಲು ಇವೇ ಬಿಜೆಪಿ ಪ್ರಣಾಳಿಕೆ ಮುಖ್ಯಾಂಶಗಳು:-
01. ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸುತ್ತೇವೆ.
02. ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಅರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ 'ಅಟಲ್ ಆಹಾರ ಕೇಂದ್ರ' ವನ್ನು ಸ್ಥಾಪಿಸುತ್ತೇವೆ.
03. 'ಪೋಷಣೆ' ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕಳೆ ಶ್ರೀ ಅನ್ನ ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ವಿತರಿಸುವುದಾಗಿ ಬಿಜೆಪಿ ಭರವಸೆ ನೀಡಿದೆ.
04. ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ [ಯುಸಿಸಿ) ಜಾರಿಗೊಳಿಸುತ್ತೇವೆ.
05. ರಾಜ್ಯದಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆ'ಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
ಇದನ್ನೂ ಓದಿ- ಮೈಸೂರಿನಲ್ಲಿ ಪ್ರಧಾನಿ ನರೇಂದ್ರಮೋದಿ ರ‍್ಯಾಲಿಯಲ್ಲಿ ಭದ್ರತಾ ಲೋಪ- ವಿಡಿಯೋ ವೈರಲ್
06. 'ಒನಕೆ ಓಬವ್ವಸಾಮಾಜಿಕ ನ್ಯಾಯ ನಿಧಿ' ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.
07. ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ 'ಸುಲಲಿತ ಜೀವನ'ಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.
08. "ವಿಶ್ವೇಶ್ವರಯ್ಯ ವಿದ್ಯಾ ಯೋಜನೆ" ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
09. 'ಸಮನ್ವಯ ಯೋಜನೆ' ಇದರಡಿ ತ್ವರಿತಗತಿಯಲ್ಲಿ ಎಸ್‌ಎಮ್‌ಇ ಗಳು ಮತ್ತು ಐಟಿಐಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
10. ಐಎಎಸ್/ಕೆಎಎಸ್/ಬ್ಯಾಂಕಿಂಗ್/ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
11. 'ಮಿಷನ್ ಸ್ವಾಸ್ಥ್ಯ ಕರ್ನಾಟಕ'ದ ಅಡಿ ಸರ್ಕಾರಿ ಆಸ್ಪತ್ರೆ /ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
ಇದನ್ನೂ ಓದಿ- ನನ್ನ ಜನರೇ ನನಗೆ ʼಈಶ್ವರ ಸ್ವರೂಪಿʼ, ನಾನು ಅವರ ಕೊರಳಲ್ಲಿರುವ ʼನಾಗ ಸರ್ಪʼ..!
12. ನಮ್ಮಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು 'ರಾಜ್ಯ ರಾಜಧಾನಿ ಪ್ರದೇಶ' ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
13. ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್ ಗಳನ್ನು ಎಲೆಕ್ನಿಕ್ ಬಸ್‌ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ 'ಇಬಿ ಸಿಟಿ' ಅಭಿವೃದ್ಧಿ
14. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 2 30,000 ಕೋಟಿ ಮೊತ್ತದ 'ಕೆ-ಅಗಿ ಫಂಡ್' ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್ ಗಳನ್ನು ಸ್ಥಾಪಿಸುತ್ತೇವೆ.
15. ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್ ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್ ಗಾಣಗಾಪುರ ಕಾರಿಡಾರ್್ರ ಅನ್ನು ಅಭಿವೃದ್ಧಿಪಡಿಸಲು 91,500 ಕೋಟಿ ವಿನಿಯೋಗಿಸುತ್ತೇವೆ.
16. ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್ ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿಸುವ ಮೂಲಕ 'ಉತ್ಪಾದನಾ ಆಧರಿತ ಪ್ರೋತ್ಸಾಹ' ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.