ಪಾಪದ ಕೆಲಸ ಮಾಡಿದವರಿಗೆ ಚಪ್ಲಿಲಿ ಹೊಡಿರಿ: ಒಳೇಟಿನ ವಿರುದ್ಧ ಸೋಮಣ್ಣ ಕಿಡಿ
ಮಾದೇಶ್ವರನ ಅಣೆ... ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ... ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ. ಪಕ್ಷ ತಾಯಿಗೆ ಸಮಾನ ಪಕ್ಷದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ??
ಚಾಮರಾಜನಗರ: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆ ನಡೆಸಿದರು. ಈ ಸಮಯದಲ್ಲಿ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರುಗಳೇ ಕಾರಣ ಎಂದು ಆಕ್ರೋಶ ಹೊರಹಾಕಿದರು.
ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ವಿ. ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದರು.
ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ, 7-8 ಮಂದಿಯಿಂದ ಈ ಸೋಲುಂಟಾಯಿತು, ನನ್ನ ಸಮಾಜದವರೇ ನನಗೇ ಕೈ ಕೊಟ್ಟರು. ಯಾರ್ಯಾರೋ ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ವಿ. ಸೋಮಣ್ಣ ಆರೋಪ ಮಾಡಿದರು.
ಇದನ್ನೂ ಓದಿ- ಸಮ್ಮಿಶ್ರ ಸರ್ಕಾರ ಪತನ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ
ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ... ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ... ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ. ಪಕ್ಷ ತಾಯಿಗೆ ಸಮಾನ ಪಕ್ಷದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ?? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.
ಇದನ್ನೂ ಓದಿ- ಪ್ರಬಲ ಸಮುದಾಯದ ನಾಯಕನಿಗೆ ಪಕ್ಷದ ಜವಾಬ್ದಾರಿ ನೀಡಲು ಬಿಜೆಪಿ ಸಿದ್ದತೆ ! ಕಾಂಗ್ರೆಸ್ ಸಿಎಂ ಆಯ್ಕೆ ನಂತರ ಕಮಲ ಪಾಳಯದ ತೀರ್ಮಾನ
ಕೆಲವರು ಮನಸ್ಸು ಬಿಚ್ಚಿ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿಲ್ಲ. ದೊಡ್ಡ ಸ್ಥಾನಕ್ಕೆ ಸೋಮಣ್ಣ ಹೋಗುತ್ತಾರೆ ಎಂದಿದ್ದೆ ಮುಳುವಾಯಿತು ಎಂದು ಪಕ್ಷದ ಕೆಲ ಮುಖಂಡರ ವಿರುದ್ಧ ಬೇಸರ ವ್ಯಕ್ತಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.