Karnataka Assembly Election : ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಮಾಜಿ ಸಚಿವ ಎ ಮಂಜು ಜೆಡಿಎಸ್ ಅಭ್ಯರ್ಥಿಯಾಗಿ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆ ಜೋರಾಗಿತ್ತು. ಇನ್ನೂ ಜೆಡಿಎಸ್ ಪಕ್ಷದಲ್ಲಿ ಈಗಾಗಲೇ ನಾನೇ ಅಭ್ಯರ್ಥಿ ಎಂದು ಭವಾನಿ ರೇವಣ್ಣ ಹೇಳುವ ಮೂಲಕ ದೇವೇಗೌಡರ ಕುಟುಂಬದಲ್ಲಿ ಹೆಚ್ಚು ಚರ್ಚೆಯಾಗಿತ್ತು, ಇದರ ಬೆನ್ನಲ್ಲೇ ಮಾಜಿ ಸಚಿವ ಎ ಮಂಜು ನಾನು ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಮಂಗಳವಾರ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಮಾಜಿ ಸಚಿವ ಎ. ಮಂಜು ಅಧಿಕೃತವಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಅರಕಲಗೂಡು ತಾಲೂಕಿನಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಸಭೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿದ ಎ.ಮಂಜು, ಎಲ್ಲರ ಸಮ್ಮುಖದಲ್ಲಿ ನಾನು ಜೆಡಿಎಸ್‌ನಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದರು.‌ ಅಲ್ಲದೇ ಸಭೆಯಲ್ಲಿದ್ದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಣೆ‌ ಪ್ರಮಾಣ ಮಾಡಿಸಿದರು.


ಇದನ್ನೂ ಓದಿ-ತ್ರಿಪುರಾದಲ್ಲಿ ಸಸ್ಪೆನ್ಸ್ ಅಂತ್ಯ! ಮಾಣಿಕ್ ಸಹಾ ಹೊಸ ಸಿಎಂ, ಪ್ರಮಾಣ ವಚನಕ್ಕೆ ಪ್ರಧಾನಿ ಮೋದಿ


ಈಗಾಗಲೇ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಎ. ಮಂಜು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಇನ್ನೂ ಕ್ಷೇತ್ರದಲ್ಲಿ ಜನರ ಒಲವು, ತಯಾರಿ ಕುರಿತಂತೆ ದೇವೇಗೌಡರ ಜೊತೆಗೆ ಚರ್ಚಿಸಿದ್ದಾರೆ. ಮಾರ್ಚ್ 12 ರಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಲಿದ್ದಾರೆ ಎಂದು ಹೇಳಲಾಗಿದೆ.


ಜೆಡಿಎಸ್ ಪಕ್ಷಕ್ಕೆ ಸೇರಿ ಎಂ ಮಂಜು ಗೆಲ್ಲಸುವ ಜವಾಬ್ದಾರಿ ನಿಮ್ಮದು. ನಾವು ಇನ್ಮುಂದೆ ಜೆಡಿಎಸ್ ಎಂದು ಹೇಳಿದ್ದಾರೆ. ಅಲ್ಲದೆ ಬೆಂಬಲಿಗರಿಂದ ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ ಪರ ಘೋಷಣೆ ಕೂಗಿಸಿದ್ದಾರೆ.


ಇದನ್ನೂ ಓದಿ-ಬಲ ಪಂಥೀಯ ಸರ್ಕಾರ ಬರಬಾರದು,ಕಾಫೀರರನ್ನು ಕೊಲ್ಲಬೇಕು: ಬಯಲಾಯ್ತು ಪ್ರವೀಣ್ ನೆಟ್ಟಾರೂ ಹಂತಕರ ಪ್ಲ್ಯಾನ್


 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.