ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ - ಬಸವರಾಜ ಬೊಮ್ಮಾಯಿ
ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ.ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ.ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ. ಕಳೆದ ಬಾರಿ ನನಗೆ 104 ಸೀಟು ಬಂದಿತ್ತು. ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದರು, ಕಡಿಮೆ ಸೀಟು ಬಂದಿವೆ.ಏನೇ ಆಗಲಿ ಸೋಲು ಸೋಲು.ನಾವು ಇದರ ಬಗ್ಗೆ ಆತ್ಮವಲೋಕನ ಮಾಡಿ, ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ: Mudigere Assembly Election Result 2023: ನಯನ ಮೋಟಮ್ಮ ʼಕೈʼ ಹಿಡಿದ ಮೂಡಿಗೆರೆ ಮತದಾರರು
ನಮ್ಮದು ಒಂದು ರಾಷ್ಟ್ರೀಯ ಪಕ್ಷ. ನಾವು ಕೇವಲ ಚುನಾವಣಗೆ ಮಾತ್ರ ಕೆಲಸ ಮಾಡಲ್ಲ.ರಾಷ್ಟ್ರದ ನಿರ್ಮಾಣಕ್ಕೆ ಕೆಲಸ ಮಾಡುತ್ತೇವೆ.ಇನ್ನೇನು ಕೇವಲ 8 ರಿಂದ 10 ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿದೆ. ಆ ಚುನಾವಣೆಗೆ ಪಕ್ಷ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ.ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದರು.
ನಾವು ಹಿಂದೆ ಎಷ್ಟೋ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವೆ.ಸೋಲಿಗೆ ಹಲವಾರು ರೀತಿಯ ಕಾರಣಗಳು ಇವೆ. ಅವುಗಳನ್ನು ಎಲ್ಲವನ್ನೂ ಕುಳಿತು ಚರ್ಚೆ ಮಾಡುತ್ತೇವೆ. ಏನು ವ್ಯತ್ಯಾಸ ಆಗಿದೆ, ಎಲ್ಲಿ ಏನಾಗಿದೆ ಎಂದು ಚರ್ಚಿಸಿ, ಆಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.
ಸುದೀಪ್ ರಾಜಕಾರಣಿ ಅಲ್ಲ:
ಸೋಲಿಗೆ ಅವರನ್ನು ಹೊಣೆ ಅನ್ನುವುದು ಸರಿಯಲ್ಲ. ನಾನು ಈಗಾಗಲೇ ಹೇಳಿದ್ದೇನೆ. ಈ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ