"ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?"

ಪಕ್ಷದ ಪದಾಧಿಕಾರಿಗಳಿಗೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತ ಗಟ್ಟೆಗಳ ವಿವರ ನೀಡುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ಅವರು ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Apr 27, 2023, 04:35 PM IST
  • ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ?
  • ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ?
"ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?" title=

ಬೆಂಗಳೂರು: ಪಕ್ಷದ ಪದಾಧಿಕಾರಿಗಳಿಗೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತ ಗಟ್ಟೆಗಳ ವಿವರ ನೀಡುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತಾಗಿ ಅವರು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ 'ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ' ಎಂದು ಅವರು ಕಿಡಿ ಕಾರಿದ್ದಾರೆ.

ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು.ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News