ವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ
Karnataka Assembly Election 2023: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಎಲ್ಲಾ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಮ್ಮಿಕೊಂಡಿದ್ದ ಪ್ರಚಾರಕ್ಕೆ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದರು. ಭುಗತಹಳ್ಳಿಯಲ್ಲಿ ಸಿದ್ದರಾಮಯ್ಯರಿಗೆ ಜೈಕಾರ ಕೂಗಿದ್ದ ಯುವಕರು ಬಿಜೆಪಿಗೆ ಧಿಕ್ಕಾರವೆಂದು ಘೋಷಣೆ ಕೂಗಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದರು.
ಇದೀಗ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ’ವೆಂದು ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಉದುರುತ್ತಿವೆ ‘ಕಮಲ’ದ ದಳಗಳು: ಪ್ಲಾಪ್ ಆಯ್ತಾ ಜೋಶಿ ಪ್ಲ್ಯಾನ್?
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ‘ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಇದನ್ನು ನಮ್ಮ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲಾ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ’ ಎಂದು ಸಿದ್ದರಾಮಯ್ಯನರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಅಮಿತ್ ಶಾ ಆಗಮನಕ್ಕೆ ಗುಂಡ್ಲುಪೇಟೆ ಸಜ್ಜು; ‘ಚಾಣಕ್ಯ’ನ ಕಾಣಲು ಕ್ಷಣಗಣನೆ!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.