ಹುಬ್ಬಳಿ/ಬೆಂಗಳೂರು: ಬಿಜೆಪಿ ನಾಯಕರ ಸಂಧಾನ ಸಭೆ ವಿಫಲವಾದ ಹಿನ್ನಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದು, ಕಾಂಗ್ರೆಸ್ ಸೇರುವ ಬಗ್ಗೆ ಕೈ ಹಿರಿಯ ಮುಖಂಡ ಶಾಸಕ ಶಾಮನೂರ್ ಶಿವಶಂಕರಪ್ಪ ಜತೆ ಮಾತುಕತೆ ಪ್ರಾರಂಭಿಸಿದ್ದಾರೆ ಎಂದು ಶೆಟ್ಟರ್ ಆಪ್ತ ವಲಯ ಖಚಿತ ಪಡಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕೊನೆಗೂ ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್


ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ವಿಧಾನಸಭೆ ಟಿಕೆಟ್ ಕೈ ತಪ್ಪಿದ್ದ ಕಾರಣ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ನಾಳೆ ಶಿರಸಿಗೆ ತೆರಳಿ ಸ್ಪೀಕರ್ ಕಾಗೇರಿ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ.ರಾಜೀನಾಮೆ ಪ್ರಕ್ರಿಯೆ ಜೊತೆಗೆ ದಾವಣಗೆರೆ ಶಾಸಕ ಶಾಮನೂರ್ ಶಿವಶಂಕರಪ್ಪ ಜೊತೆ ಕೆಲ ಸುತ್ತಿನ ಮಾತುಕತೆ ನಡೆಸಿದ ಶೆಟ್ಟರ್, ಇಂದು ಸಂಜೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜೊತೆ ದೂರವಾಣಿ ಮೂಲಕ ಮಾತಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಟಿಕೆಟ್ ನೀಡದಿರುವ ಬೆನ್ನಲ್ಲೇ ಫೈಟರ್ ರವಿ ಬಿಜೆಪಿಗೆ ರಾಜೀನಾಮೆ


ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿ,  ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಿದ್ದು, ಶೆಟ್ಟರ್ ಅವರನ್ನು ಮನವೊಲಿಸಲು ಮುಂದಾದರು ಎನ್ನಲಾಗಿದೆ.ಆದರೆ ಶೆಟ್ಟರ್ ತಮ್ಮ ನಿರ್ಧಾರ ಧೃಡ ಎಂದು ಪಕ್ಷದ ವರಿಷ್ಠರಿಗೆ ಸ್ಪಷ್ಟಪಡಿಸಿದ್ದರಿಂದಾಗಿ ಸಭೆಯಿಂದ ಹೊರಬಂದ ನಾಯಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರಟರು.ಈ ಸಂದರ್ಭದಲ್ಲಿ ಕಾರಿಗೆ ಅಡ್ಡಗಟ್ಟಿ ಹೈಕಮಾಂಡ ವಿರುದ್ಧ ಶೆಟ್ಟರ್‌ ಬೆಂಬಲಿಗರು ಘೋಷಣೆ ಕೂಗಿದರು.


ಇದನ್ನೂ ಓದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೀಟು ಮೀಸಲಿಟ್ಟ ಕಾಂಗ್ರೆಸ್...!


ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿ, ನನ್ನ ವಿರುದ್ದ ಷಡ್ಯಂತ್ರ ಮಾಡಿ ಟಿಕೆಟ್ ತಪ್ಪಿಸುವ ಕೆಲಸ ಮಾಡಲಾಗಿದೆ,ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಪಕ್ಷೇತರನಾಗಿ ಸ್ಪರ್ಧಿಸಬೇಕೋ ಅಥವಾ ಬೇರೆ ನಿರ್ಧಾರ ಕೈಗೊಳ್ಳಬೇಕೆಂಬ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಪಡೆದು ನಾಳೆ ತೀರ್ಮಾನ ಮಾಡುತ್ತೇನೆ' ಎಂದು ಹೇಳಿದರು.


ಇನ್ನೊಂದೆಡೆಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ಘೋಷಿಸದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.