ನವದೆಹಲಿ: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಘೋಷಣೆಯಾಗಲಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
224 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಈ ಹಿನ್ನೆಲೆ ಬುಧವಾರ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿದ್ದು, ಚುನಾವಣೆಯ ದಿನಾಂಕ ಘೋಷಿಸಿದೆ.
First-time voters have increased from 2018-19 by 9.17 lakhs in Karnataka. All young voters who are turning 18 years of age by April 1, will be able to vote in Karnataka Assembly elections: Chief Election Commissioner Rajiv Kumar pic.twitter.com/fNlVxVcta6
— ANI (@ANI) March 29, 2023
ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್ ಕುಮಾರ್, ‘2023ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಆಯೋಗ ಸಿದ್ಧವಿದೆ. ಮೇ 24ಕ್ಕೆ 15ನೇ ವಿಧಾನಸಭೆಯ ಅವಧಿ ಮುಕ್ತಾಯವಾಗಲಿದೆ. ಈಶಾನ್ಯದ 3 ರಾಜ್ಯಗಳ ಚುನಾವಣೆ ಯಶಸ್ವಿಯಾಗಿವೆ' ಎಂದು ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ |
ಒಂದೇ ಹಂತದಲ್ಲಿ ಮತದಾನ |
224 ಕ್ಷೇತ್ರ |
ನೀತಿ ಸಂಹಿತೆ ಜಾರಿ |
ಮಾರ್ಚ್ 29 |
ಬುಧವಾರ |
ಅಧಿಸೂಚನೆ ಪ್ರಕಟ |
ಏಪ್ರಿಲ್ 13 |
ಗುರುವಾರ |
ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ | ಏಪ್ರಿಲ್ 20 | ಗುರುವಾರ |
ನಾಮಪತ್ರಗಳ ಪರಿಶೀಲನೆ |
ಏಪ್ರಿಲ್ 21 |
ಶುಕ್ರವಾರ |
ನಾಮಪತ್ರ ಹಿಂಪಡೆಯಲು ಕೊನೆ ದಿನ |
ಏಪ್ರಿಲ್ 24 | ಸೋಮವಾರ |
ಮತದಾನ |
ಮೇ 10 |
ಬುಧವಾರ |
ಮತ ಏಣಿಕೆ ಮತ್ತು ಫಲಿತಾಂಶ | ಮೇ 13 |
ಶನಿವಾರ |
ಚುನಾವಣಾ ಪ್ರಕ್ರಿಯೆ ಮುಕ್ತಾಯ | ಮೇ 15ರೊಳಗೆ |
ಸೋಮವಾರ |
'ಕರ್ನಾಟಕದಲ್ಲಿ ಒಟ್ಟು 5 ಕೋಟಿ 21 ಲಕ್ಷ ಮತದಾರರು ಇದ್ದಾರೆ. ಈ ಪೈಕಿ 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರಿದ್ದಾರೆ. 4,699 ತೃತೀಯ ಲಿಂಗಿ ಮತದಾರರು ಇದ್ದು, 12.15 ಲಕ್ಷ ಯುವ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಮಾಹಿತಿ ನೀಡಿದರು.
ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241ರಷ್ಟಿದೆ. ರಾಜ್ಯದಲ್ಲಿ ಒಟ್ಟು 5.55 ಲಕ್ಷ ವಿಕಲಚೇತನ ಮತದಾರರಿದ್ದಾರೆ. ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 24,063, ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ ಮತ್ತು 1,320 ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆಗಳಿವೆ. 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.