ಗುಂಡ್ಲುಪೇಟೆ: ಕೇಂದ್ರ ಗೃಹ‌ ಸಚಿವ ಅಮಿತ್ ಶಾ ಇಂದು ಗುಂಡ್ಲುಪೇಟೆಗೆ ಭೇಟಿ ನೀಡಲಿರುವ ಹಿನ್ನೆಲೆ ಈಗಾಗಲೇ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಹಳೇ ಬಸ್ ನಿಲ್ದಾಣದ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಬಿಜೆಪಿ ಭಾವುಟಗಳನ್ನು ಹಾಕಲಾಗಿದೆ. ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ಇನ್ನೂ ಅಮಿತ್ ಶಾ ಮಧ್ಯಾಹ್ನ 12 ಗಂಟೆ ಸುಮಾರಿಗೆ ಹೆಲಿಕ್ಯಾಪ್ಟರ್ ಮೂಲಕ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಬಂದಿಳಿಯಲಿದ್ದು, ಹೆದ್ದಾರಿ ಮೂಲಕ ರೋಡ್ ಶೋ ನಡೆಸಲಿದ್ದಾರೆ.


ಇದನ್ನೂ ಓದಿ: ಆರ್‌ಎಸ್‌ಎಸ್ ‘ವಿಘ್ನಸಂತೋಷಿ’ಗಳು ಲಿಂಗಾಯತ ನಾಯಕರನ್ನು ಮುಗಿಸುವ ಸಂಚು ರೂಪಿಸಿವೆ..!


ಸಂಸದ ವಿ‌.ಶ್ರೀನಿವಾಸ್ ಪ್ರಸಾದ್, ಶಾಸಕ ಸಿ.ಎಸ್.ನಿರಂಜನಕುಮಾರ್ ಸೇರಿದಂತೆ ಬಿಜೆಪಿ ಪ್ರಮುಖ ಅಮಿತ್ ಶಾಗೆ ಸಾಥ್ ನೀಡಲಿದ್ದಾರೆ. ಇನ್ನೂ ಐಜಿಪಿ ಪ್ರವೀಣ್ ಮಧುಕರ್ ಪವರ್ ನೇತೃತ್ವದಲ್ಲಿ ಸುಮಾರು 800 ಮಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.  


ಟಿಕೆಟ್ ಕೈತಪ್ಪಿದ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೀಗಾಗಿ ಯಾವ್ಯಾವ ಕ್ಷೇತ್ರದಲ್ಲಿ ಪಕ್ಷಕ್ಕೆ ಹಿನ್ನೆಡೆಯಾಗುವ ನಿರೀಕ್ಷೆ ಇದೆಯೋ ಆ ಕ್ಷೇತ್ರಗಳಲ್ಲಿ ಗೆಲ್ಲಲು ಅಮಿತ್ ಶಾ ರಣತಂತ್ರ ರೂಪಿಸುತ್ತಿದ್ದಾರೆ. ಹೇಗಾದರೂ ಮಾಡಿ ಬಂಡಾಯ ಶಮಣ ಮಾಡಿ ಜನರ ನಾಡಿಮಿಡಿತ ಅರಿತು ಮತಬೇಟೆ ನಡೆಸುವಂತೆ ಬಿಜಪಿ ನಾಯಕರಿಗೆ ಅಮಿತ್ ಶಾ ಸೂಚಿಸಿದ್ದಾರಂತೆ.  


ಇದನ್ನೂ ಓದಿ: Karnataka Election 2023: 'ಕತ್ತಲಲ್ಲಿ ಬೆಳಕಾಗಿ ಹೊರಹೊಮ್ಮಿದ್ದ ಬಸವಣ್ಣನವರು ಭಾರತ ಮತ್ತು ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವದ ದಾರಿ ತೋರಿಸಿದ್ದಾರೆ'


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.