ಬೆಳಗಾವಿ (ಯಮಕನಮರಡಿ): ಪ್ರಧಾನಿ ನರೇಂದ್ರ ಮೋದಿಯವರು, ಅಮಿತ್ ಶಾ ಅವರು ಯಾಕೆ ಬರುತ್ತಿದ್ದಾರೆ ಅಂತ ಕಾಂಗ್ರೆಸ್ ನವರು ಕೇಳುತ್ತಾರೆ. ಆದರೆ, ರಾಹುಲ್, ಪ್ರಿಯಾಂಕಾ ಇಲ್ಲಿ ಬಂದಿದ್ದಾರೆ. ರಾಹುಲ್, ಪ್ರಿಯಾಂಕಾ ಬಂದಷ್ಟು ನಮಗೆ ಅನುಕೂಲ. ಅವರು ಹೋದಲ್ಲಿ ಕಾಂಗ್ರೆಸ್ ಸೋತಿದೆ. ಅವರು ಬಂದಷ್ಟು ನಮಗೆ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದರು.
ಇಂದು ಯಮಕನಮರಡಿ ಕ್ಷೇತ್ರದಲ್ಲಿ ಅಭ್ಯರ್ಥಿ ಬಸವರಾಜ ಹಂದ್ರಿ ಪರ ಪ್ರಚಾರ ನಡೆಸಿದ ಬಳಿಕ ಅವರು ಮಾತನಾಡಿದರು.
ಈ ಬಾರಿ ಚುನಾವಣೆ ಐತಿಹಾಸಿಕವಾಗಿದೆ. ನಮ್ಮ ನೆಚ್ಚಿನ ಪ್ರಧಾನಿ ಮೋದಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ದೇಶದ ಅಭಿವೃದ್ದಿ ಮಾಡುತ್ತಿದ್ದಾರೆ. ಯಾರಿಗೆ ಕರ್ನಾಟಕದ ಅಭಿವೃದ್ಧಿ ಬೇಕಿದೆ ಅವರು ಡಬಲ್ ಎಂಜಿನ್ ಸರ್ಕಾರ ಬೆಂಬಲಿಸುತ್ತಾರೆ. ಡಬಲ್ ಎಂಜಿನ್ ಸರ್ಕಾರ ಬೇಡ ಅನ್ನುವವರು ಕಾಂಗ್ರೆಸ್ ಗೆ ಮತ ಹಾಕಲಿ. ಡಬಲ್ ಎಂಜಿನ್ ಸರ್ಕಾರ ಇರುವುದರಿಂದ ರಾಜ್ಯದಲ್ಲಿ 60 ಸಾವಿರ ಕೋಟಿ ರೂ. ವೆಚ್ಚದಲ್ಲಿ 6000 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗಿದೆ. ಬೆಳಗಾವಿ ಕುಡಚಿ ರೈಲ್ವೆ ಲೈನ್ ಡಬಲ್ ಮಾಡಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆ ಎಲ್ಲವೂ ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿದೆ ಎಂದರು.
ಇದನ್ನೂ ಓದಿ: Karnataka Election 2023 : ಜಗಳೂರಿನಲ್ಲಿ ಬಾದ್ ಶಾ ಸುದೀಪ್ ಭರ್ಜರಿ ರೋಡ್ ಶೋ, ಬಿಜೆಪಿ ಪರ ಮತಬೇಟೆ
ಅಮಿತ್ ಶಾ ಅವರು, ಪ್ರಧಾನ ಮಂತ್ರಿ ನರೇಂದ್ರ ಅವರ ಹೆಸರು ಹೇಳಿದ್ದಕ್ಕೆ ಕಾಂಗ್ರೆಸ್ ನವರಿಗೆ ಉರಿ ಹತ್ತಿದೆ. ಮೋದಿಯವರು ಎಲ್ಲಿ ಹೊಗಿದ್ದಾರೆ. ಅಲ್ಲಿ ಕಾಂಗ್ರೆಸ್ ಮುಕ್ತವಾಗಿದೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಕಾಂಗ್ರೆಸ್. ಬಿಡಿಎ, ಹಾಸಿಗೆ ದಿಂಬಿನಲ್ಲೂ ಲಂಚ ಪಡೆದರು. ರಾಜಿಯವ್ ಗಾಂದಿಯೇ 85% ಭ್ರಷ್ಟಾಚಾರ ನಡೆಸಯುತ್ತಿದ್ದ ಬಗ್ಗೆ ಹೇಳಿದ್ದರು. ಅವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ನಾವು ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಎಸ್ಸಿ 15 ರಿಂದ 17, ಎಸ್ಟಿ 3 ರಿಂದ 7 ಕ್ಕೆ ಹೆಚ್ಚಳ ಮಾಡಿದ್ದೇವೆ. ಆಂತರಿಕ ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎಂದರು.
2016 ಸಿದ್ದರಾಮಯ್ಯ ಆಂತರಿಕ ಮೀಸಲಾತಿ ನೀಡಲಾಗದೇ ಓಡಿ ಹೋಗಿದ್ದರು.ನಾವು ಆಂತರಿಕ ಮೀಸಲಾತಿ ನೀಡಿದ್ದೇವೆ. ಮುಸ್ಲಿಂ ಸಮುದಾಯದಲ್ಲಿ ಅನೇಕ ಉಪ ಪಂಗಡಗಳಿವೆ. ಅವರಿಗೆ ಆರ್ಥಿಕ ಹಿಂದುಳಿದ ವರ್ಗದವರಿಗೆ ಮೀಸಲಾತಿ ಇದೆ.ಕಾಂಗ್ರೆಸ್ ನವರು ನಮ್ಮ ಮೇಲೆ ಭಾವನೆಗಳ ಜೊತೆ ಆಟ ಆಡುತ್ತೇವೆ ಎಂದು ಆರೋಪ ಮಾಡುತ್ತಾರೆ. ಎಲ್ಲರಿಗೂ ಅವರ ಬಗ್ಗೆ ಸ್ವಾಭಿಮಾನ ಇರುತ್ತದೆ. ಬಡವರಿಗೂ ಸ್ವಾಭಿಮಾನ ಇರುತ್ತದೆ ಎಂದರು.
ಇದನ್ನೂ ಓದಿ: ಚುನಾವಣೆ ಗೆಲ್ಲೋದಷ್ಟೇ ಗುರಿ ಎಂದ ಪ್ರಲ್ಹಾದ್ ಜೋಶಿ
ಬಸವರಾಜ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸಿ. ಯಮಕನಮರಡಿ ಅಭಿವೃದ್ಧಿಗೆ ಅಗತ್ಯ ಅನುದಾನ ನಾವು ನೀಡುತ್ತೇವೆ ಎಂದರು ಮತದಾರರಲ್ಲಿ ಮನವಿ ಮಾಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.