ಮಂಗಳೂರು(ದಕ್ಷಿಣ ಕನ್ನಡ): ಬಿಜೆಪಿ ಪಕ್ಷದ ಟಿಕೆಟ್ ಸಿಗದ ಹಿನ್ನೆಲೆ ಸ್ವಂತ ಪಕ್ಷದ ವಿರುದ್ಧವೇ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಮುನಿಸಿಕೊಂಡಿದ್ದಾರೆ. ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಚುನಾವಣಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜಕೀಯಕ್ಕೆ ಅಂಗಾರ ನಿವೃತ್ತಿ ಘೋಷಿಸಿದ್ದಾರೆ. ‘ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ’ ಎಂದು ಅಂಗಾರ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಜಕಾರಣ ಫುಟ್ಬಾಲ್ ಆಟವಲ್ಲ, ಅದೊಂದು ಚದುರಂಗದಾಟ- ಡಿ.ಕೆ. ಶಿವಕುಮಾರ್


ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ, ಅದೇ ನನಗೆ ಹಿನ್ನಡೆಯಾಯಿತು. ನಾನು ಇನ್ನು ರಾಜಕಾರಣದಲ್ಲಿರಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇರಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮೊದಲ ಬಾರಿಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಎಸ್.ಅಂಗಾರ ಬಳಿಕ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಸಚಿವರಾಗಿದ್ದರು. ಸುಳ್ಯದಲ್ಲಿ ಅವರು ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿದ್ದರು.


ಇದನ್ನೂ ಓದಿ: Karnataka Election 2023: ಕೈ ತಪ್ಪಿದ ಟಿಕೆಟ್, ಬಿಜೆಪಿ ತೊರೆಯಲಿದ್ದಾರಾ ಲಕ್ಷ್ಮಣ ಸವದಿ!?


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.