ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ: ಸಿಎಂ ಬಸವರಾಜ ಬೊಮ್ಮಾಯಿ

Karnataka Assembly Election 2023: ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ‍್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ತಿಳಿಸಿದ್ದರು.

Written by - Prashobh Devanahalli | Edited by - Puttaraj K Alur | Last Updated : Apr 16, 2023, 01:12 PM IST
  • ಜಗದೀಶ್ ಶೆಟ್ಟರ್ ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ
  • ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ನಡೆದಿದೆ
  • ಶೆಟ್ಟರ್‍ಗೆ ದೆಹಲಿ ಮಟ್ಟದಲ್ಲಿ ದೊಡ್ಡ ಹುದ್ದೆ ನೀಡಲಾಗುವುದು ಎಂದು ಹೇಳಲಾಗಿತ್ತು
ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ: ಸಿಎಂ ಬಸವರಾಜ ಬೊಮ್ಮಾಯಿ  title=
'ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ'

ಹುಬ್ಬಳ್ಳಿ: ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ಜಗದೀಶ್ ಶೆಟ್ಟರ್‍ಗೆ ಪಕ್ಷದಲ್ಲಿಯೇ ಇರುವಂತೆ ನಾವು ಎಲ್ಲಾ ರೀತಿಯ ಮನವೊಲಿಕೆ ಮಾಡಿದೇವು’ ಎಂದು ಹೇಳಿದ್ದಾರೆ’  

ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ

ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು. ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ನಾನು ಅವರ ವಿರುದ್ಧ ಸ್ಪರ್ಧೆ ಮಾಡಿದ್ದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ‍್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ತಿಳಿಸಿದ್ದರು. ಅವರು ಪಕ್ಷದಲ್ಲಿಯೇ ಇರಬೇಕಿತ್ತು. ಶನಿವಾರವೂ ಚರ್ಚೆ ಮಾಡಿ ಅವರು ಹೇಳಿದವರಿಗೆ ಟಿಕೆಟ್ ಕೊಡಲಾಗುವುದೆಂದು ತಿಳಿಸಲಾಗಿತ್ತು. ಶೆಟ್ಟರ್ ಪಕ್ಷದಲ್ಲಿಯೇ ಮುಂದುವರಿದುಕೊಂಡು ಹೋಗಿದ್ದರೆ ಉತ್ತಮವಾಗಿತ್ತು ಎಂದರು.

ಇದನ್ನೂ ಓದಿ: Karnataka Election 2023 : ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್​​ ರಾಜೀನಾಮೆ

ಬಿ.ಎಸ್.ಯಡಿಯೂರಪ್ಪ ಆದರ್ಶಪ್ರಾಯರು

ಬಿ.ಎಸ್.ಯಡಿಯೂರಪ್ಪನವರು ನಮಗೆ ಆದರ್ಶರು, ಮುಖ್ಯಮಂತ್ರಿ ಇರೋವಾಗಲೇ ಅವರು ರಾಜಿನಾಮೆ ಕೊಟ್ಟಿದ್ದಾರೆ. ಅವರು ನಮಗೆಲ್ಲಾ ಪಕ್ಷದ ಆದರ್ಶ ಹೇಳಿಕೊಟ್ಟವರು. ಬಿಜೆಪಿ ಎಲ್ಲಾ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗೋ ಪ್ರಯತ್ನ ನಡೆಸಿದೆ. ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳೆದು ನಿಂತಿದೆ. 2ನೆ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ವಿ.ಸೋಮಣ್ಣ ಬೆಳೆದು ನಿಂತಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಅತಿಹೆಚ್ಚು ಸ್ಥಾನ ,ಅತಿಹೆಚ್ಚು ಮಂತ್ರಿ ಸ್ಥಾನಗಳನ್ನು ನೀಡಿದ್ದು ಬಿಜೆಪಿ ಎಂದರು.

ಚುನಾವಣೆ ರಣತಂತ್ರ!

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಇಬ್ಬರಿದ್ದಾರೆ. ಜೆಡಿಎಸ್‍ನಲ್ಲಿ ಎಚ್‍.ಡಿ.ಕುಮಾರಸ್ವಾಮಿ ಹೆಸರು ಇದೆ. ನಮ್ಮ ಚುನಾವಣೆ ತಂತ್ರವನ್ನು ನಾವು ರೂಪಿಸುತ್ತೇವೆ. ಪಕ್ಷ ಗೆಲ್ಲಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಆರ್‌ ಸಿ ಬಿ ಮ್ಯಾಚ್‌ನಲ್ಲಿ ಆರ್‌ ಆರ್‌ ನಗರದ ಅಭ್ಯರ್ಥಿ ಕುಸುಮಕ್ಕನ ಜಪ..!

ವರಿಷ್ಠರ ತೀರ್ಮಾನ

ಎಲ್ಲರಿಗೂ ಅವಕಾಶ ಕೊಡಲಾಗಿದೆ. ನಿನ್ನೆ ಸ್ವತಃ ಅಮಿತ್ ಶಾ ಅವರು ಶೆಟ್ಟರ್ ಜೊತೆ ಮಾತಾಡಿದ್ದಾರೆ. ರಾಜ್ಯ ಮತ್ತು ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತು. ಇದು ಮೇಲಿನವರ ತೀರ್ಮಾನವೆಂದು ತಿಳಿಸಿದ ಸಿಎಂ, ಬದಲಾವಣೆ ತರುವಂತಹ ಕಾಲ ಇದು ಎಂದು ಹೇಳಿದರು.

ಡ್ಯಾಮೇಜ್ ಕಂಟ್ರೋಲ್!

ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ. ಅವರ  ಎಲ್ಲಾ ಪ್ರಶ್ನೆಗೆ ನಾನು ಉತ್ತರ ನೀಡುವುದಿಲ್ಲ. ಹೊಸ ಬೆಳವಣಿಗಾಗಿ ಈ ಪ್ರಯತ್ನ. ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಸ್ವಲ್ಪ ಹಾನಿಯಾಗಲಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News