ಬೆಂಗಳೂರು: ಅಂತಂತ್ರವಾದರೂ ಕಪ್ ನಮ್ಮದೇ ಎಂಬ ಅಶೋಕ್ ಅವರ ಹೇಳಿಕೆ  ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ಕಪ್ಪು ಹಾಗೂ ಟೋಪಿ ಎಲ್ಲವನ್ನೂ ಅವರೇ ಇಟ್ಟುಕೊಳ್ಳಲಿ' ಎಂದು ಲೇವಡಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ. ನನ್ನ ಪ್ರಕಾರ 141 ಸ್ಥಾನ ಗೆಲ್ಲುತ್ತೇವೆ. ನಮ್ಮ ಸಮೀಕ್ಷೆಯಲ್ಲಿ ಎಕ್ಸಿಟ್ ಪೋಲ್ ಸಮೀಕ್ಷೆಗಿಂತ ಹೆಚ್ಚು ಮಾದರಿಗಳಿಂದ ಸಂಗ್ರಹ ಮಾಡಲಾಗಿದೆ. ಕಾಂಗ್ರೆಸ್ ಪರವಾಗಿ ದೊಡ್ಡ ಅಲೆ ಇದೆ.


ಎಕ್ಸಿಟ್ ಪೋಲ್ ಸಮಿಕ್ಷೆಗಿಂತ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ ಹೊರತು ಕಡಿಮೆ ಆಗಲೂ ಸಾಧ್ಯವಿಲ್ಲ. ಎಕ್ಸಿಟ್ ಪೋಲ್ ನಲ್ಲಿ ನಮ್ಮ ಪರ ವಿಶ್ವಾಸ ತೋರಿದ್ದು ಅದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಬರಲಿದೆ ಎಂಬುದು ನಮ್ಮ ನಂಬಿಕೆ. ನಾನು ಸ್ಥಳೀಯವಾಗಿ ಓಡಾಟ ಮಾಡಿದ್ದೇನೆ. ಬಿಜೆಪಿ ಪ್ರತಿ ಕ್ಷೇತ್ರದಲ್ಲಿ ಎಷ್ಟೇ ದುಡ್ಡು ಸುರಿಸಿರಬಹುದು, ಎಷ್ಟೇ ದೊಡ್ಡ ನಾಯಕರು ಬಂದು ಪ್ರಚಾರ ಮಾಡಿರಬಹುದು. ಆವರೆ ಮತ ಎಂಬುದು ಬುಲೆಟ್ ಗಿಂತ ಶಕ್ತಿಶಾಲಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹೇಗೆ ಜನ ಬ್ರಿಟೀಷರ ಗುಂಡಿಗೆ ಹೆದರಲಿಲ್ಲವೋ, ಅದೇ ರೀತಿ ಜನ ಡಬಲ್ ಇಂಜಿನ್ ಸರ್ಕಾರ, ದುರಾಡಳಿತ, ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಂಡಿದ್ದರು. ಜನ ತಮ್ಮ ನಿರ್ಧಾರ ಬದಲಿಸುವುದಿಲ್ಲ. ನಾಳೆ ಮಧ್ಯಾಹ್ನ 1 ಗಂಟೆ ವೇಳೆಗೆ ಫಲಿತಾಂಶ ಬರಲಿದೆ.


ಇದನ್ನೂ ಓದಿ: CBSC 12th Result Topper: ಸಿಬಿಎಸ್ಇ ಫಲಿತಾಂಶ ಪ್ರಕಟ, ಈ ಬಾರಿಯ ಟಾಪರ್ ಯಾರು?


ಅತಂತ್ರ ವಿಧಾನಸಭೆ ನಿರ್ಮಾಣಾ ಆಗಬಹುದು ಎಂಬ ಕಾರಣಕ್ಕೆ ತೆರೆಮರೆಯಲ್ಲಿ ಪ್ರಯತ್ನ ನಡೆಯುತ್ತಿದ್ದು, ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹೋಗುವ ಮುನ್ನ ನಾನು ಮೈತ್ರಿಗೆ ಸಿದ್ಧ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, 'ಯಾವ ತೆರೆಮರೆ ಪ್ರಯತ್ನವೂ ಇಲ್ಲ. ಇಷ್ಟು ದಿನ ಅವರು ತಮಗೆ ಬಹುಮತ ಬರಲಿದೆ ಎಂದು ಹೇಳುತ್ತಿದ್ದರು. ಅವರು ಯಾರ ಜತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವೋ ಗೊತ್ತಿಲ್ಲ' ಎಂದು ತಿಳಿಸಿದರು.


ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಬಹುಮತ ಬಾರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದರು ಎಂದು ಕೇಳಿದಾಗ, 'ಕುಮಾರಣ್ಣ ಅವರು ಯಾವ ಲೆಕ್ಕಾಚಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನಾವಂತೂ ಆರೋಗ್ಯ ಉತ್ತಮವಾಗಿ ಇರುವವರೆಗೂ ನಿವೃತ್ತಿ ಪಡೆಯುವುದಿಲ್ಲ. ದಳದ ಕಾರ್ಯಕರ್ತರು ಸಮಯ ವ್ಯರ್ಥ ಮಾಡದೆ ನಮ್ಮ ಜತೆ ಸೇರಿಕೊಳ್ಳಲಿ ಎಂದು ಹೇಳಿದ್ದೇನೆ. ಇಂದು ಅದನ್ನೆ ಹೇಳುತ್ತೇನೆ' ಎಂದು ತಿಳಿಸಿದರು.


ಕುಮಾರಸ್ವಾಮಿ ಅವರು ಹೊರದೇಶಕ್ಕೆ ಹೋಗಿರುವ ಹಿಂದೆ ಬೇರೆ ಸಾಧ್ಯತೆಗಳೇನಾದರೂ ಇದೆಯೇ ಎಂದು ಕೇಳಿದ ಪ್ರಶ್ನೆಗೆ, 'ಅವರ ಲೆಕ್ಕಾಚಾರದ ಬಗ್ಗೆ ನಾನು ಯಾಕೆ ಮಾತನಾಡಲಿ, ನನಗೂ ಆರೋಗ್ಯ ಸ್ವಲ್ಪ ವ್ಯತ್ಯಾಸ ಆಗಿದೆ. ಅವರು ಆರೋಗ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದಾರೆ. ವಿಶ್ರಾಂತಿ ಪಡೆಯಲಿ. ನಾನು ವಿಶ್ರಾಂತಿ ಪಡೆಯಲು ಹೊರಗೆ ಹೋಗಬೇಕು ಅಂದುಕೊಂಡಿದ್ದೆ, ನಮ್ಮಲ್ಲಿ ಬೇಡ ಎನ್ನುತ್ತಿದ್ದಾರೆ' ಎಂದು ತಿಳಿಸಿದರು.


ಗೆಲ್ಲಬಹುದಾದ ಸಂಭಾವ್ಯರನ್ನು ಸಂಪರ್ಕಿಸುವ ಬಗ್ಗೆ ಕೇಳಿದಾಗ, 'ಅದು ಸಹಜ. ಎಲ್ಲರೂ ಆಡಳಿತ ಪಕ್ಷದಲ್ಲಿ ಇರಲು ಬಯಸುತ್ತಾರೆ' ಎಂದು ತಿಳಿಸಿದರು.


ರೆಸಾರ್ಟ್ ರಾಜಕೀಯ ಈ ಬಾರಿ ಅಂತ್ಯ ಆಗುತ್ತಾ ಎಂದು ಕೇಳಿದಾಗ, 'ಬಿಜೆಪಿಯವರು ಎಷ್ಟೇ ಸೀಟು ಬಂದರು ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅದು ಅವರ ಭ್ರಮೆ. ಎಲ್ಲಾ ಪಕ್ಷದವರು ತಮ್ಮ ಪಕ್ಷದ ನಾಯಕರನ್ನು ಒಂದು ಕಡೆ ಸೇರಿಸಿ ವಿಶ್ರಾಂತಿ ಪಡೆದು ಚರ್ಚೆ ಮಾಡುತ್ತಾರೆ. ಇದು ಸಹಜ' ಎಂದು ತಿಳಿಸಿದರು.


ಎಕ್ಸಿಟ್ ಪೋಲ್ ಆಧಾರದ ಮೇಲೆ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಮಾಡಲಾಗುತ್ತಿದೆಯೇ ಎಂದು ಕೇಳಿ, 'ಸದ್ಯಕ್ಕೆ ಯಾವ ಅಧಿಕಾರ ಹಂಚಿಕೆ ಆಗಿಲ್ಲ. ನಮ್ಮ ಹೈಕಮಾಂಡ್, ಮಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಏನು ಹೇಳುತ್ತಾರೋ ಅದೇ ಅಂತಿಮ' ಎಂದು ಹೇಳಿದರು.


ಇದನ್ನೂ ಓದಿ: ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ನೀವು 20 ವರ್ಷಗಳಿಂದ ಕಾಯುತ್ತಿರುವ ಸಮಯ ಬಂದಿದೆಯೇ ಎಂದು ಕೇಳಿದಾಗ, 'ನಾನು ಶ್ರಮ ಪಟ್ಟಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷ ಸೋತ ನಂತರ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸಿದ್ದರಾಮಯ್ಯ ಅವರು ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ನಂತರ ಸೋನಿಯಾ ಗಾಂಧಿ ಅವರು ನನಗೆ ಈ ಜವಾಬ್ದಾರಿ ನೀಡಿದರು. ನಾನು ಈ ಜವಾಬ್ದಾರಿ ಪಡೆದ ದಿನದಿಂದ ಮಲಗಿಲ್ಲ. ಪಕ್ಷದ ನಾಯಕರು ಕಾರ್ಯಕರ್ತರಿಗೂ ಮಲಗಲು ಬಿಟ್ಟಿಲ್ಲ. ಪಕ್ಷ ಸಂಘಟನೆಗೆ ಏನು ಮಾಡಬೇಕೋ ಮಾಡಿದ್ದೇನೆ. ಎಲ್ಲರೂ ನಮಗೆ ಸಹಕಾರ ನೀಡಿ ಆಶೀರ್ವಾದ ನೀಡುತ್ತಾರೆ. ಉತ್ತಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ' ಎಂದು ತಿಳಿಸಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...


Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ