ಚುನಾವಣೆ ಫಲಿತಾಂಶ: ಜನಾದೇಶ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ
ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಬೆಂಗಳೂರು: ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ.
ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ.ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ