ವಿಧಾನಸಭಾ ಚುನಾವಣೆ: ಮತ ಎಣಿಕೆ ದಿನ ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 13ರಂದು ನಡೆಯಲಿರುವ ಮತ ಎಣಿಕೆ ಸಂಬಂಧವಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಮೇ 12ರ ಸಂಜೆ 6ರಿಂದ ಮೇ 13ರ ರಾತ್ರಿ 11 ಗಂಟೆಯವರೆಗೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.

Written by - Zee Kannada News Desk | Last Updated : May 12, 2023, 03:57 PM IST
  • ಮುನ್ನೆಚ್ಚರಿಕಾ ಕ್ರಮವಾಗಿ ಮೇ 12ರ ಸಂಜೆ 6ರಿಂದ ಮೇ 13ರ ರಾತ್ರಿ 11 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
  • ಈ ಆದೇಶವು ಮದುವೆ, ಶವ ಸಂಸ್ಕಾರಕ್ಕೆ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ
ವಿಧಾನಸಭಾ ಚುನಾವಣೆ: ಮತ ಎಣಿಕೆ ದಿನ ನಿಷೇಧಾಜ್ಞೆ ಜಾರಿ title=
file photo

ಕೊಪ್ಪಳ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 13ರಂದು ನಡೆಯಲಿರುವ ಮತ ಎಣಿಕೆ ಸಂಬಂಧವಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಮೇ 12ರ ಸಂಜೆ 6ರಿಂದ ಮೇ 13ರ ರಾತ್ರಿ 11 ಗಂಟೆಯವರೆಗೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ-Karnataka Election 2023: ‘ತೆನೆ ಹೊತ್ತ ಮಹಿಳೆ’ಗೆ ಗಾಳ ಹಾಕುತ್ತಿದೆಯೇ BJP-CONG! ಬ್ಯಾಕ್ ರೂಂ ಆಪರೇಷನ್ ಸಕ್ಸಸ್ ಆಗುತ್ತಾ?

ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಧ್ವನಿವರ್ಧಕಗಳನ್ನು ಹಾಕುವುದು, ಮೆರವಣಿಗೆ, ಸಭೆ, ಪಟಾಕಿಗಳನ್ನು ಸಿಡಿಸುವುದು ಹಾಗೂ ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಚುನಾವಣೆಯ ಫಲಿತಾಂಶದಿಂದಾಗಿ ಯಾವುದೇ ಘರ್ಷಣೆಗಳು ಉಂಟಾಗದಂತೆ ಹಾಗೂ ಸಾರ್ವಜನಿಕ ಶಾಂತತೆಗೆ ಮತ್ತು ಕಾನೂನು ಸುವ್ಯವಸ್ಥಗೆ ಧಕ್ಕೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮೇ 12ರ ಸಂಜೆ 6ರಿಂದ ಮೇ 13ರ ರಾತ್ರಿ 11 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ-ಕಾಂಗ್ರೆಸ್ ಬಿಜೆಪಿ ನಮ್ಮ ನಾಯಕರನ್ನು ಸಂಪರ್ಕಿಸಿದೆ ! ಯಾರಿಗೆ ಬೆಂಬಲ ಎನ್ನುವ ನಿರ್ಧಾರ ಪಕ್ಷ ತೆಗೆದುಕೊಂಡಿದೆ : ಜೆಡಿಎಸ್

ನಿಷೇಧಾಜ್ಞೆ ಅನ್ವಯ ಮತ ಎಣಿಕಾ ಕೇಂದ್ರವಾದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು ಆವರಣವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಚುನಾವಣಾ ಕರ್ತವ್ಯದಲ್ಲಿ ನಿರತರಾದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಚುನಾವಣಾ ಅಭ್ಯರ್ಥಿಗಳು, ಎಣಿಕಾ ಎಜೆಂಟರು ಹಾಗೂ ಪಾಸ್ ಹೊಂದಿರುವ ಮಾಧ್ಯಮದವರಿಗೆ ಮಾತ್ರ ಮತ ಎಣಿಕಾ ಕೇಂದ್ರದಲ್ಲಿ ಪ್ರವೇಶಕ್ಕೆ ಅವಕಾಶವಿರುತ್ತದೆ. ಈ ಆದೇಶವು ಮದುವೆ, ಶವ ಸಂಸ್ಕಾರಕ್ಕೆ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News