ತಂದೆ-ತಾಯಿ, ಹೆಂಡತಿ-ಮಕ್ಕಳ ಜೊತೆ ಕಾಲ ಕಳೆಯಿರಿ: ‘ಕೈ’ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸಲಹೆ

Karnataka Assembly Election 2023: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.

Written by - Zee Kannada News Desk | Last Updated : May 11, 2023, 04:57 PM IST
  • ಕಾಂಗ್ರೆಸ್ ಅಭ್ಯರ್ಥಿಗಳ ಪರ ಹಗಲು-ರಾತ್ರಿ ವಿಶ್ರಾಂತಿ ಮರೆತು ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಅಭಿನಂದನೆಗಳು
  • ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ ಮತ್ತು ಹೆಂಡತಿ-ಮಕ್ಕಳ ಜೊತೆ ಕಾಲ ಕಳೆಯಿರಿ
  • ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಸಿದ್ದರಾಮಯ್ಯ
ತಂದೆ-ತಾಯಿ, ಹೆಂಡತಿ-ಮಕ್ಕಳ ಜೊತೆ ಕಾಲ ಕಳೆಯಿರಿ: ‘ಕೈ’ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸಲಹೆ title=
ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 224 ಕ್ಷೇತ್ರಗಳ ವಿಧಾನಸಭಾ ಚುಣಾವಣೆಗೆ ಬುಧವಾರ ಮತದಾನ ನಡೆದಿದೆ. ರಾಜ್ಯದಾದ್ಯಂತ ಶೇ.72.67ರಷ್ಟು ಮತದಾನವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಅತಿಹೆಚ್ಚು ಅಂದರೆ ಶೇ.85.83ರಷ್ಟು ಮತದಾನವಾಗಿದ್ದು, ಬೆಂಗಳೂರು ದಕ್ಷಿಣದಲ್ಲಿ ಅತಿಕಡಿಮೆ ಅಂದರೆ ಶೇ.52.80ರಷ್ಟು ವೋಟಿಂಗ್ ನಡೆದಿದೆ.   

ವಿಶ್ರಾಂತಿ ಪಡೆಯಿರಿ ಎಂದ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಹಗಲು-ರಾತ್ರಿ ಎನ್ನದೆ ದುಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿಶೇಷ ಮನವಿ ಮಾಡಿದ್ದು, ವಿಶ್ರಾಂತಿ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ. ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Election 2023: ಮತದಾನ ಮುಗಿಯುತ್ತಿದ್ದಂತೆ ಸಿಎಂ ಟೆಂಪಲ್ ರನ್: ಸವದತ್ತಿ ಕ್ಷೇತ್ರಕ್ಕೆ ಬೊಮ್ಮಾಯಿ ಭೇಟಿ

‘ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರಲ್ಲೆರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ. ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ-ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ʼಬಜರಂಗದಳʼಕ್ಕೂ ಭಜರಂಗಿಗೂ, ಇಮಾಮ್ ಸಾಬ್‌ಗೂ ಶಾಸ್ತ್ರಿಗೂ ಏನ್ ಸಂಬಂಧ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News