ಬೆಂಗಳೂರು: ರಾಜ್ಯದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಗೆ ಬುಧವಾರ ಮತದಾನ ನಡೆದಿದೆ. ಅಲ್ಲಲ್ಲಿ ಕೆಲವು ಘಟನೆಗಳನ್ನು ಹೊರತುಪಡಿಸಿದರೆ ರಾಜ್ಯದಾದ್ಯಂತ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ. ಇದೇ ವೇಳೆ ಮತದಾನಕ್ಕೆ ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತ ಬಂಧುಗಳೇ, ಮತದಾನಕ್ಕೆ ಇನ್ನು ಕೆಲವೇ ಹೊತ್ತು ಉಳಿದಿರುವ ಈ ಸಂದರ್ಭ ಪಕ್ಷದ ಗೆಲುವಿನ ದೃಷ್ಟಿಯಿಂದ ನಿರ್ಣಾಯಕವಾದುದು. ಕೊನೆಯ ಮತ ಚಲಾವಣೆಯಾಗುವವರೆಗೆ ಪ್ರತಿಯೊಬ್ಬ ಮತದಾರನ ಜೊತೆ ಪ್ರತಿಯೊಂದು ಬೂತ್‍ಗಳಲ್ಲಿ ನೇಮಿಸಲಾಗಿರುವ ಸಮಿತಿಯ ಸದಸ್ಯರು ಸಂಪರ್ಕದಲ್ಲಿರಬೇಕು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಈ ಬಾರಿ ಚುನಾವಣೆ ಇಂಟರೆಸ್ಟಿಂಗ್ ಅನಿಸಲಿಲ್ಲ, ಅದಕ್ಕೆ ಪ್ರಚಾರಕ್ಕೆ ಹೋಗಿಲ್ಲ..!
#ಕಾಂಗ್ರೆಸ್_ಬರಲಿದೆ_ಪ್ರಗತಿ_ತರಲಿದೆ pic.twitter.com/vPqG2z5Hav
— Siddaramaiah (@siddaramaiah) May 10, 2023
‘ಪ್ರತಿಯೊಂದು ಮತ ಕೂಡ ಚಲಾವಣೆಯಾಗುವಂತೆ ನೋಡಿಕೊಳ್ಳಬೇಕಾಗಿರುವುದು ನಿಮ್ಮೆಲ್ಲರ ಕರ್ತವ್ಯ. ನೀವು ದಣಿದಿದ್ದೀರಿ ನಿಜ, ನಿಮ್ಮ ಶ್ರಮ ವ್ಯರ್ಥವಾಗಲಾರದು. ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ. ಜೈ ಹಿಂದ್, ಜೈ ಕರ್ನಾಟಕ’ವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಬಹುಮತದ ಅಧಿಕಾರ
ಈ ಬಾರಿಯ ಚುನಾವಣೆಯಲ್ಲಿ ನಮಗೆ 130-150 ಸ್ಥಾನಗಳು ಬರಲಿದ್ದು, ಕಾಂಗ್ರೆಸ್ ನೇತೃತ್ವದ ಬಹುತದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Karnataka Elections 2023: ಹೊಸಕೆರೆಹಳ್ಳಿ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದ ರಾಕಿಂಗ್ ಸ್ಟಾರ್ ಯಶ್!
ರಾಜ್ಯದ ಜನರು ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತು ಹೋಗಿದ್ದಾರೆ. ಈ ಬಾರಿ ಮತದಾರ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ‘ಕೈ’ ಹಿಡಿಯಲಿದ್ದಾನೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ. ರಾಜ್ಯದ ಅಭಿವೃದ್ಧಿಗೆ ಜನರು ಈ ಬಾರಿ ನಮ್ಮನ್ನು ಬೆಂಬಲಿಸಲಿದ್ದಾರೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.