Karnataka Election 2023: ಕಾಂಗ್ರೆಸ್ ಕಾರ್ಯಕರ್ತರ ಶ್ರಮಕ್ಕೆ ಶಹಬ್ಬಾಸ್ ಹೇಳಿದ ಸಿದ್ದರಾಮಯ್ಯ
Karnataka Assembly Election 2023: ಈ ಬಾರಿಯ ಚುನಾವಣೆಯಲ್ಲಿ ನಮಗೆ 130-150 ಸ್ಥಾನಗಳು ಬರಲಿದ್ದು, ಕಾಂಗ್ರೆಸ್ ನೇತೃತ್ವದ ಬಹುತದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಗೆ ಬುಧವಾರ ಮತದಾನ ನಡೆದಿದೆ. ಅಲ್ಲಲ್ಲಿ ಕೆಲವು ಘಟನೆಗಳನ್ನು ಹೊರತುಪಡಿಸಿದರೆ ರಾಜ್ಯದಾದ್ಯಂತ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ. ಇದೇ ವೇಳೆ ಮತದಾನಕ್ಕೆ ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತ ಬಂಧುಗಳೇ, ಮತದಾನಕ್ಕೆ ಇನ್ನು ಕೆಲವೇ ಹೊತ್ತು ಉಳಿದಿರುವ ಈ ಸಂದರ್ಭ ಪಕ್ಷದ ಗೆಲುವಿನ ದೃಷ್ಟಿಯಿಂದ ನಿರ್ಣಾಯಕವಾದುದು. ಕೊನೆಯ ಮತ ಚಲಾವಣೆಯಾಗುವವರೆಗೆ ಪ್ರತಿಯೊಬ್ಬ ಮತದಾರನ ಜೊತೆ ಪ್ರತಿಯೊಂದು ಬೂತ್‍ಗಳಲ್ಲಿ ನೇಮಿಸಲಾಗಿರುವ ಸಮಿತಿಯ ಸದಸ್ಯರು ಸಂಪರ್ಕದಲ್ಲಿರಬೇಕು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಈ ಬಾರಿ ಚುನಾವಣೆ ಇಂಟರೆಸ್ಟಿಂಗ್ ಅನಿಸಲಿಲ್ಲ, ಅದಕ್ಕೆ ಪ್ರಚಾರಕ್ಕೆ ಹೋಗಿಲ್ಲ..!
Karnataka Elections 2023: ಹೊಸಕೆರೆಹಳ್ಳಿ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದ ರಾಕಿಂಗ್ ಸ್ಟಾರ್ ಯಶ್!
ರಾಜ್ಯದ ಜನರು ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತು ಹೋಗಿದ್ದಾರೆ. ಈ ಬಾರಿ ಮತದಾರ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ‘ಕೈ’ ಹಿಡಿಯಲಿದ್ದಾನೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ. ರಾಜ್ಯದ ಅಭಿವೃದ್ಧಿಗೆ ಜನರು ಈ ಬಾರಿ ನಮ್ಮನ್ನು ಬೆಂಬಲಿಸಲಿದ್ದಾರೆಂದು ಸಿದ್ದರಾಮಯ್ಯ ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.