ಬಿಜೆಪಿಯ ಷಡ್ಯಂತ್ರಗಳಿಗೆ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ: ಸಿದ್ದರಾಮಯ್ಯ
Karnataka Assembly Election 2023: ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಬಿಜೆಪಿಯವರು ನನ್ನ ಹೇಳಿಕೆಯ ವಿಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂತಹ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ತಮ್ಮ ವಿಡಿಯೋ ತಿರುಚಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಸಿಎಂ ಬೊಮ್ಮಾಯಿ ಒಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೆ’ ಎಂದು ತಿರುಗೇಟು ನೀಡಿದ್ದಾರೆ.
ʼಮೋದಿ ನನ್ನ ದೇವರು..ʼ.! ಮಳೆಯಲ್ಲಿ ನೆನೆದಿದ್ದ ಪ್ರಧಾನಿ ಕಟೌಟ್ ಒರೆಸಿದ ʼನಮೋ ಅಭಿಮಾನಿʼ..
ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Karnataka election 2023: 10 ಡಿಕೆಶಿ ಬಂದ್ರೂ ಲಿಂಗಾಯತರ ಡ್ಯಾಂ ಒಡೆಯಲ್ಲ- ಸಿಸಿ ಪಾಟೀಲ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.