ಮೈಸೂರು: ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಬೇಸತ್ತಿದ್ದ ಜನರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಬಳಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದರು. ಕಾಂಗ್ರೆಸ್ ಪಕ್ಷದ ಪರವಾಗಿ ಮತ ಹಾಕಿದ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ’ ಎಂದು ಹೇಳಿದರು.


COMMERCIAL BREAK
SCROLL TO CONTINUE READING

‘ನಾನು ಮಾನವತವಾದಿ. ನಾನು ಯಾವುದೇ ಜಾತಿ ವಿರೋಧಿ ಅಲ್ಲ. ನನ್ನನ್ನು ಬಿಜೆಪಿಯವರು ಲಿಂಗಾಯತ ವಿರೋಧಿ ಅಂತಾ ಬಿಂಬಿಸಲು ಹೊರಟಿದ್ದರು. ಆದರೆ ಬಿಜೆಪಿಯವರ ಆಟ ಚುನಾವಣೆಯಲ್ಲಿ ನಡೆಯಲಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ 100 ಬಾರಿ ರಾಜ್ಯಕ್ಕೆ ಬಂದರೂ ಏನೂ ನಡೆಯಲ್ಲ ಅಂತಾ ನಾನು ಹೇಳಿದ್ದೆ. ಇದೀಗ ಫಲಿತಾಂಶ ನಿಮ್ಮ ಕಣ್ಣ ಮುಂದೆ ಇದೆ’ ಎಂದು ಹೇಳಿದರು.


ಇದನ್ನೂ ಓದಿ: ಕೋಲಾರದ 6 ವಿಧಾಸಭಾ ಕ್ಷೇತ್ರಗಳಲ್ಲಿ 4 ಕಾಂಗ್ರೆಸ್‌, 2 ಜೆಡಿಎಸ್‌ ವಶಕ್ಕೆ..! ಬಿಜೆಪಿ ನಾಪತ್ತೆ..


ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ನಾವು ಕೊಟ್ಟ ಎಲ್ಲಾ ಭರವಸೆಯನ್ನು ಈಡೇರಿಸುತ್ತೇವೆ. ರಾಜ್ಯದ ಜನರ ಹಿತದೃಷ್ಟಿ ಮತ್ತು ಅಭಿವೃದ್ಧಿ ದೃಷ್ಟಿಯಿಂದ ನಾವು ಆಡಳಿತ ನಡೆಸುತ್ತೇವೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಮತ ನೀಡಿದ ರಾಜ್ಯದ ಎಲ್ಲಾ ಮತದಾರರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆಂದು ಸಿದ್ದರಾಮಯ್ಯ ಹೇಳಿದರು.


ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ತಿರ್ಮಾನ ಮಾಡ್ತಾರೆ ಎಂದ ಸಿದ್ದರಾಮಯ್ಯ, ನೀವು ಸಿಎಂ ಅಭ್ಯರ್ಥಿನಾ ಎಂದಿದ್ದಕ್ಕೆ ಮಾತನಾಡದೆ ಹೊರಟು ಹೋದರು. ಕಾಂಗ್ರೆಸ್‍ ಪಕ್ಷಕ್ಕೆ ಸ್ಪಷ್ಟ ಬಹುಮತದ ಸರ್ಕಾರ ಬಂದಿರುವ ಕಾರಣ ಇದೀಗ ಸಿಎಂ ಯಾರಾಗುತ್ತಾರೆ ಅನ್ನೋದು ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಿಎಂ ರೇಸ್‍ನಲ್ಲಿದ್ದಾರೆ. ಬಹುತೇಕ ಸಿದ್ದರಾಮಯ್ಯನವರೇ ಮತ್ತೆ ಸಿಎಂ ಆಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.


ಇದನ್ನೂ ಓದಿ: Chamrajnagar Assembly Election Result 2023: ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಮೂರರಲ್ಲಿ ಕಾಂಗ್ರೆಸ್ ಕೈ ಹಿಡಿದ ಮತದಾರರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.