ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಮುನ್ನೆಡೆ ಸಾಧಿಸಿದೆ. ಬರೋಬ್ಬರಿ 124 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಹುಮತದ ಸರ್ಕಾರ ರಚಿಸಲು ಸಜ್ಜಾಗುತ್ತಿದೆ.


COMMERCIAL BREAK
SCROLL TO CONTINUE READING

ಸದ್ಯದ ಮಾಹಿತಿ ಪ್ರಕಾರ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 127 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 68 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಜೆಡಿಎಸ್ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.  


ಇದನ್ನೂ ಓದಿ: Chikkamagalore Vidhan Sabha Chunav: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೈ ಕಲಿಗಳದ್ದೇ ಮೇಲು ಗೈ!


ರಾಜ್ಯದ ಮತದಾರರು ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಿದ್ದು, ಕಾಂಗ್ರೆಸ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಲವು ಕೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಈಗಾಗಲೇ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಬಾರಿ ಬಹುಮತದ ಸರ್ಕಾರ ರಚಿಸುವ ಕನಸಿನಲ್ಲಿದ್ದ ಬಿಜೆಪಿ ನಾಯಕರಿಗೆ ದೊಡ್ಡ ಆಘಾತವಾಗಿದೆ.


ಕಾಂಗ್ರೆಸ್ ಪಕ್ಷ ಈ ಬಾರಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾದಂತಾಗಿದೆ. ಪೂರ್ಣ ಬಹುಮತದ ಸರ್ಕಾರ ರಚಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ಮುಖ ಮಾಡಿದ್ದಾರೆ. ಬಿಜೆಪಿ ಭದ್ರಕೋಟೆಯಾಗಿದ್ದ ಅನೇಕ ಕ್ಷೇತ್ರಗಳು ‘ಕೈ’ ಪಾಲಾಗಿವೆ.


ಇದನ್ನೂ ಓದಿ: Tumkur Assembly Election Result 2023: ತುಮಕೂರು ನಗರದಲ್ಲಿ 11ನೇ ಸುತ್ತಿನ ಮತಎಣಿಕೆ ಮುಕ್ತಾಯ: 701 ಮತಗಳಿಂದ ಕಾಂಗ್ರೆಸ್ ಮುನ್ನಡೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.