Karnataka Assembly Election 2023: ಇಂದು ಬೆಳಗ್ಗೆ 11.30ಕ್ಕೆ ದಿನಾಂಕ ಘೋಷಣೆ
Karnataka Assembly Elections 2023: 224 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಬೆಳಗ್ಗೆ 11.30ಕ್ಕೆ ಭಾರತೀಯ ಚುನಾವಣಾ ಆಯೋಗವು ಘೋಷಿಸಲಿದೆ.
224 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
ಇದನ್ನೂ ಓದಿ: BSY ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ: ಕಾಂಗ್ರೆಸ್
DK Shivakumar: ಪ್ರಜಾಧ್ವನಿ ರೋಡ್ ಶೋ ವೇಳೆ ಕಂತೆ ಕಂತೆ ಹಣ ಎಸೆದ ಡಿಕೆಶಿ, ವಿಡಿಯೋ ವೈರಲ್!
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖ ಪಕ್ಷಗಳ ಜೊತೆಗೆ ಈ ಬಾರಿ ಆಪ್, ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಹೊಸ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ'ವು ಅದೃಷ್ಟ ಪರೀಕ್ಷೆಗೆ ಇಳಿದಿದೆ. ಚಿತ್ರನಟ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ ಸೇರಿದಂತೆ ಹಲವು ಪಕ್ಷಗಳು ಈ ಬಾರಿ ಚುನಾವಣಾ ಕಣದಲ್ಲಿದ್ದು, ಅದೃಷ್ಟ ಪರೀಕ್ಷೆ ನಡೆಸುತ್ತಿವೆ. ಹೀಗಾಗಿ ಈ ಬಾರಿಯ ಚುನಾವಣಾ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಯಾವ ಪಕ್ಷಕ್ಕೆ ಮತದಾರ ವಿಜಯದ ಮಾಲೆ ಹಾಕುತ್ತಾನೆ ಅನ್ನೋದರ ಬಗ್ಗೆ ಕುತೂಹಲ ಕೆರಳಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.