ವಿಧಾನಸಭಾ ಚುನಾವಣೆ: ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ಜಾಗೃತಿ
ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಡಿಮೆ ಮತದಾನ ದಾಖಲಾದ 328 ಮತಗಟ್ಟೆಗಳಲ್ಲಿ, ಕಡಿಮೆ ಮತದಾನವಾದ ಗ್ರಾಮೀಣ ಪ್ರದೇಶದ 168 ಮತ್ತು ನಗರ ಪ್ರದೇಶದ 160 ಮತಗಟ್ಟೆ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ವಿನೂತನ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಮತದಾನ ಸಿದ್ದತೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೇ 08ರಂದು ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ನಗರ ಪ್ರದೇಶದ 280 ಹಾಗೂ ಗ್ರಾಮೀಣ ಭಾಗದ 1042 ಮತಗಟ್ಟೆಗಳು ಸೇರಿ ಒಟ್ಟು 1322 ಮತಗಟ್ಟೆಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಮತ್ತು ವಿನೂತನ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಡಿಮೆ ಮತದಾನ ದಾಖಲಾದ 328 ಮತಗಟ್ಟೆಗಳಲ್ಲಿ, ಕಡಿಮೆ ಮತದಾನವಾದ ಗ್ರಾಮೀಣ ಪ್ರದೇಶದ 168 ಮತ್ತು ನಗರ ಪ್ರದೇಶದ 160 ಮತಗಟ್ಟೆ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ರಾಹುಲ್ ಗಾಂಧಿಯಿಂದ ಚಿಕ್ಕೋಡಿಯಲ್ಲಿ ಭರ್ಜರಿ ಕ್ಯಾಂಪೇನ್
ಜಿಲ್ಲೆಯ ಯುವ ಮತದಾರರ ಮತದಾನ ಪ್ರತಿಶತ ಹೆಚ್ಚಿಸಲು ಎಲ್ಲಾ ಪದವಿ ಕಾಲೇಜಿನ ಯುವ ಮತದಾರರಿಂದ ನೈತಿಕ ಹಾಗೂ ಕಡ್ಡಾಯ ಮತದಾನ ಮಾಡುವಂತೆ ಪ್ರಾತ್ಯಕ್ಷಿಕೆ, ವಾಕಥಾನ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಮತ್ತು ಸ್ವ-ಸಹಾಯ ಸಂಘಗಳ ಮಹಿಳೆಯರಿಂದ ಪ್ರತಿಜ್ಞಾ ವಿಧಿ ಮತ್ತು ಮತದಾನದ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಜಿಲ್ಲೆಯ ಮಹಿಳಾ ಮತದಾರರ ಮತದಾನ ಪ್ರತಿಶತ ಹೆಚ್ಚಿಸಲು ಅಂಗನವಾಡಿ, ಆಶಾ ಮತ್ತು ಮಹಿಳಾ ಬಿ.ಇಡಿ ಕಾಲೇಜು ವಿದ್ಯಾರ್ಥಿನಿಯರಿಂದ ವಾಕ್‌ಥಾನ್ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಂಘಟಿಸಲಾಗಿದೆ.
ವಿಶೇಷ ಚೇತನರಿಂದ ನೈತಿಕ ಹಾಗೂ ಕಡ್ಡಾಯ ಮತದಾನದ ಕುರಿತು ಬೈಕ್ ರಾಲಿ ಮೂಲಕ ಜಾಗೃತಿ ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯ ನಗರ ಮತ್ತು ಗ್ರಾಮ ಪಂಚಾಯತಿಗಳಲ್ಲಿ ನೈತಿಕ ಹಾಗೂ ಕಡ್ಡಾಯ ಮತದಾನದ ಕುರಿತು ವಾಕ್ ಥಾನ್, ಕ್ಯಾಂಡಲ್ ಜಾಥಾ, ಬೈಕ್ ರಾಲಿ, ಮಾನವ ಸರಪಳಿ, ಮನೆ-ಮನೆ ಭೇಟಿ ಇನ್ನಿತರೆ ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗಿದೆ.ವಿಶೇಷ ಚೇತನತರಿಗೆ, ಲಿಂಗತ್ವ ಅಲ್ಪಸಂಖ್ಯಾತರಿಗೆ ನೈತಿಕ ಹಾಗೂ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದೆ. ಜಿಲ್ಲಾ ತಾಲೂಕ ಕೇಂದ್ರಗಳ ಬಸ್ ನಿಲ್ದಾಣಗಳಲ್ಲಿ, ಕಡ್ಡಾಯ ಮತಾನದ ಕುರಿತು ಆಡಿಯೋ ಮುಖಾಂತರ ಪ್ರಚುರ ಪಡಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮತದಾರರನ್ನು ಮತದಾನಕ್ಕಾಗಿ ವಾಹನಗಳಲ್ಲಿ ಕರೆ ತರುವುದು ಅಪರಾಧ!
ವಿಶೇಷ ಸೌಲಭ್ಯಗಳು: ಜಿಲ್ಲೆಯ ನಗರ ಪ್ರದೇಶದ 280 ಹಾಗೂ ಗ್ರಾಮೀಣ ಭಾಗದ 1042 ಮತಗಟ್ಟೆಗಳಲ್ಲಿ ಮತದಾರರಿಗೆ ನೆರಳಿನ ವ್ಯವಸ್ಥೆ, ಶಾಮಿಯಾನ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಶೌಚಾಲಯ, ಲ್ಯಾಂಪ್ ಅಂಡ್ ರೇಲಿಂಗ್, ಗಾಲಿ ಕುರ್ಚಿ (ವ್ಹೀಲ್ ಚೇರ್) ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗಿದೆ
ಮಾದರಿ ಮತಗಟ್ಟೆಗಳು: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರನ್ನು ಆಕರ್ಷಿಸಲು 12 ಮಹಿಳಾ ಮತಗಟ್ಟೆ, 05 ವಿಶೇಷ ಚೇತನ ಮತಗಟ್ಟೆ, 05 ಯುವ ಮತದಾರರ ಮತಗಟ್ಟೆ, 28-ಮಾದರಿ ಮತಗಟ್ಟೆ ಹೀಗೆ: 50 ಚಿತ್ತಾಕರ್ಷಕ ಮಾದರಿ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ ಎಂದು ಸಿಇಓ ಅವರು ಮಾಹಿತಿ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.