ಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಚುನಾವಣಾ ಆಯೋಗವು ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಚುನಾವಣಾ ಆಯೋಗವು ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ.
ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಮತದಾನ ಮೇ 10 ರಂದು ನಿಗದಿಯಾಗಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು 'ಪುಜಾಪ್ರಭುತ್ವದ ಹಬ್ಬ'ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಭಜರಂಗದಳ ನಿಷೇಧ: ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸುತ್ತೇವೆಂದ ಶ್ರೀರಾಮಸೇನೆ
ಲೋಕಸಭಾ ಚುನಾವಣೆ-2019ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
*ಬಹುಮಾನಗಳ ವಿವರ:* ಪಥಮ ಬಹುಮಾನ 25,000 ರೂ.,ದ್ವಿತೀಯ ಬಹುಮಾನ 15,000 ರೂ., ತೃತೀಯ ಬಹುಮಾನ 10,000 ರೂ., ಸಮಾಧಾನಕರ ಬಹುಮಾನ 6,000 ರೂ ಹಾಗೂ ವಿಶೇಷ ಬಹುಮಾನ 5,000 ರೂ.ಗಳನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: Crime News: ಸಹಪಾಠಿ ವಿದ್ಯಾರ್ಥಿನಿ ಜೊತೆ ಮುಸ್ಲಿಂ ವಿದ್ಯಾರ್ಥಿ ಜೊತೆಯಾಗಿ ಜ್ಯೂಸ್ ಕುಡಿದಿದ್ದಕ್ಕೆ ಹಲ್ಲೆ
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೋಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : ktkceomedia2023@gmail.com ಗೆ ಮೇ 20ರ ಶನಿವಾರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.