ಬೆಂಗಳೂರು: ಕರ್ನಾಟಕ ರಾಜಕೀಯ ಹವಾಮಾನದ ಪ್ರಕಾರ ಕಾಂಗ್ರೆಸ್ ಪಕ್ಷ ಗೆಲ್ಲುವ ಯಾವ ಮುನ್ಸೂಚನೆ ಇಲ್ಲದಿದ್ದರೂ ಸಿದ್ದರಾಮಯ್ಯನವರಿಗೆ ಸಿಎಂ ಕನವರಿಕೆ ಮಾತ್ರ ನಿಂತಿಲ್ಲ’ವೆಂದು ಬಿಜೆಪಿ ಟೀಕಿಸಿದೆ.


COMMERCIAL BREAK
SCROLL TO CONTINUE READING

#CongVsSidduVsDKS ಹ್ಯಾಶ್‍ಟ್ಯಾಗ್ ಬಳಸಿ ಮಂಗಳವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಹಾಗಾಗಿಯೇ ಪಕ್ಷದೊಳಗಿನ ಅವರ ಎದುರಾಳಿ ಡಿ.ಕೆ.ಶಿವಕುಮಾರ್ ಅವರಿಗೆ, ‘ನಿಮ್ಮದು ನನಸಾಗದ ಕನಸು’ ಎಂದು ಒದರುತ್ತಲೇ ಇರುತ್ತಾರೆ’ ಎಂದು ಕುಟುಕಿದೆ.


ಇದನ್ನೂ ಓದಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ ಘೋಷಿಸಲು ಬಿಜೆಪಿಯ ಕಿರುಕುಳವೇ ಕಾರಣ: ಕಾಂಗ್ರೆಸ್


ಕಾಂಗ್ರೆಸ್ ಪಕ್ಷದ ಹಿರಿಯ ದಲಿತ ನಾಯಕರಾದ ಡಾ.ಜಿ.ಪರಮೇಶ್ವರ್ ಅವರ ಮನದಾಳದ ದುಗುಡ. ಹೇಳದೆಯೂ ಎಲ್ಲವನ್ನೂ ಹೇಳಿದ ಇವರ ಮಾತುಗಳು, ಕಾಂಗ್ರೆಸ್ ಪಕ್ಷದಲ್ಲಿ ದಲಿತರ ಸ್ಥಿತಿಯನ್ನು ಚೆನ್ನಾಗಿ ವಿವರಿಸುತ್ತಿವೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ. 


‘ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದಾರೆಂದು ನಾವು ಮಾತ್ರ ಹೇಳುತ್ತಿಲ್ಲ, ಸ್ವತಃ ಕಾಂಗ್ರೆಸ್ಸಿಗರೇ ಹೇಳುತ್ತಿದ್ದಾರೆ. ತಮಗೆ‌ & ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯರಂತೆ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಅಗತ್ಯವಿಲ್ಲವೆಂದು ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಸಿದ್ದರಾಮಯ್ಯ ಬಣಕ್ಕೆ ಬಹಿರಂಗ ಗುದ್ದು ನೀಡಿದ್ದಾರೆ’ ಎಂದು ಟೀಕಿಸಿದೆ.


ಇದನ್ನೂ ಓದಿ: ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್.ಡಿ.ಕುಮಾರಸ್ವಾಮಿ


ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿ!


ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಮತ್ತೊಂದು ಸುಳ್ಳು. ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಯ್ಕೆಯ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈ ಪಟ್ಟಿಯು ‘FAKE’ ಆಗಿರುತ್ತದೆ’ ಎಂದು ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು ನೀಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.