ಬೆಂಗಳೂರು: ಕಾಂಗ್ರೆಸ್‍ಗೆ ಬಹುಮತದ ಅಧಿಕಾರ ಸಿಕ್ಕರೂ ಮುಖ್ಯಮಂತ್ರಿ ಆಯ್ಕೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಇದೀಗ ಮಾಜಿ ಸಿಎಂ ಇದೀಗ ಸಿದ್ದರಾಮಯ್ಯಗೆ ಕರೆ ಮಾಡಿದೆ.


COMMERCIAL BREAK
SCROLL TO CONTINUE READING

ಸಂಜೆ 6 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಬರುವಂತೆ ಸಿದ್ದರಾಮಯ್ಯರಿಗೆ ಸೂಚನೆ ನೀಡಲಾಗಿದೆ. ಸಿದ್ದರಾಮಯ್ಯರ ಜೊತೆ ಚರ್ಚಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕರೆದು ಖರ್ಗೆ  ಮಾತನಾಡಿಸಲಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷರ ಈ ನಡೆ ತೀವ್ರ ಕುತೂಹಲ ಮೂಡಿಸಿದೆ.


ಇದನ್ನೂ ಓದಿ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿದ್ದಕ್ಕೆ ಧನ್ಯವಾದ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌


ಸಿದ್ದರಾಮಯ್ಯ ಮತ್ತು ಡಿಕೆಶಿ ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ. ಸಿಎಂ ಆಯ್ಕೆ ವಿಚಾರದ ಬಗ್ಗೆ ಇಬ್ಬರೂ ನಾಯಕರ ಜೊತೆಗೆ ಚರ್ಚಿಸಿ ಅಂತಿಮ ನಿರ್ಣಯಕ್ಕೆ ಬರುವ ಸಾಧ್ಯತೆ ಇದೆ. ಯಾರಿಗೆ ಸಿಎಂ ಪಟ್ಟ ನೀಡಬೇಕು, ಯಾರಿಗೆ ಡಿಸಿಎಂ ಪಟ್ಟ ನೀಡಬೇಕು ಅನ್ನೋದರ ಬಗ್ಗೆ ತೀರ್ಮಾನವಾಗುವ ಸಾಧ್ಯತೆ ಇದೆ.


ಈಗಾಗಲೇ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪಟ್ಟ ನೀಡಬೇಕೆಂದು ಅವರ ಲಕ್ಷಾಂತರ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಸಹ ಡಿಕೆಶಿಗೆ ಸಿಎಂ ಪಟ್ಟ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆ ಯಾರಿಗೆ ಸಿಎಂ ಪಟ್ಟ ಒಲಿಯಲಿದೆ ಅನ್ನೋದು ತೀವ್ರ ಕೂತುಹಲ ಮೂಡಿಸಿದೆ.


ಇದನ್ನೂ ಓದಿ: ನಾನೂ ಕೂಡ ಸಿಎಂ ಆಕಾಂಕ್ಷಿ: ಹೊಸ ಬಾಂಬ್ ಸಿಡಿಸಿದ ಡಾ. ಜಿ. ಪರಮೇಶ್ವರ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.