ಬೆಂಗಳೂರು: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನ ರಕ್ಷಿಸಲಾಗಿತ್ತು. ಇದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಎಂಬುವರ ಮೃತದೇಹ ಪತ್ತೆಯಾಗಿತ್ತು.
ಗೋರಕ್ಷಣೆ ಹೆಸರಲ್ಲಿಇದ್ರೀಸ್ ಪಾಷಾರನ್ನು ಕೊಲೆ ಮಾಡಲಾಗಿದೆ ಎಂದು ಮೃತ ವ್ಯಕ್ತಿಯ ಕುಟುಂಬದವರು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
Karnataka | Body of a 38-year-old cattle trader identified as Idrees Pasha was found in suspicious condition in Sathanur yesterday. Case registered under relevant sections of the Indian Penal Code against one Puneet Kerehalli and others: Ramanagara Police
— ANI (@ANI) April 2, 2023
ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ, 8 ಮಂದಿ ಸಾವು!
‘ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
‘40% ಕಮಿಷನ್ ಪಡೆದು ಆರಾಮಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ನಿಮ್ಮ ವಿಫಲ ಸರ್ಕಾರ ಹೊಣೆಯಲ್ಲವೇ? ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ’ ಎಂದು ಕಾಂಗ್ರೆಸ್ ಟೀಕಿಸಿದೆ.
ಇದನ್ನೂ ಓದಿ: Koppal: 105KG ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ ವ್ಯಕ್ತಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.