ಲಿಂಗಾಯತ & ಹಿಂದುಳಿದ ನಾಯಕತ್ವ ಮುಗಿಸಿದ BL ಸಂತೋಷ್ಗೆ ಚುನಾವಣೆ ಎದುರಿಸಲು ಭಯವೇಕೆ?: ಕಾಂಗ್ರೆಸ್
Karnataka Assembly Election 2023: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
ಬೆಂಗಳೂರು: ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟು ಬಿಜೆಪಿಯಲ್ಲಿನ ಲಿಂಗಾಯತ & ಹಿಂದುಳಿದ ನಾಯಕತ್ವವನ್ನು ಮುಗಿಸಿದ ಬಿ.ಎಲ್.ಸಂತೋಷ್ ಎಂಬ ವ್ಯಕ್ತಿಗೆ ಚುನಾವಣೆ ಎದುರಿಸಲು ಭಯವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ದಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ’ ಎಂದು ಸವಾಲು ಹಾಕಿದೆ.
Karnataka election 2023: 10 ಡಿಕೆಶಿ ಬಂದ್ರೂ ಲಿಂಗಾಯತರ ಡ್ಯಾಂ ಒಡೆಯಲ್ಲ- ಸಿಸಿ ಪಾಟೀಲ್
ʼಮೋದಿ ನನ್ನ ದೇವರು..ʼ.! ಮಳೆಯಲ್ಲಿ ನೆನೆದಿದ್ದ ಪ್ರಧಾನಿ ಕಟೌಟ್ ಒರೆಸಿದ ʼನಮೋ ಅಭಿಮಾನಿʼ..
ಪ್ರಧಾನಿ ಮೋದಿ ಉದ್ಘಾಟಿಸಿದ ಹೈವೇ ಮಳೆಯಲ್ಲಿ ಮುಳುಗಿತು, ಟೇಪ್ ಕಟ್ ಮಾಡಿದ ಮೆಟ್ರೋ ನಿಲ್ದಾಣಕ್ಕೆ ನೀರು ನುಗ್ಗಿತು, ರೋಡ್ ಶೋ ಮಾಡಿದ ರಸ್ತೆ ಕಿತ್ತುಬಂತು, ಶಿವಮೊಗ್ಗ ಏರ್ಪೋರ್ಟ್ ಬಾಗಿಲು ಮುಚ್ಚಿತು, ಬೆನ್ನಿಗೆ ಗುದ್ದಿದ ರಾಮದಾಸ್ ಮನೆಯಲ್ಲಿ ಕೂರುವಂತಾಯ್ತು, ಕರೆ ಮಾಡಿದ ಕೆ.ಎಸ್.ಈಶ್ವರಪ್ಪರ ರಾಜಕೀಯ ಜೀವನ ಮುಗಿಯಿತು. ಇದೇನು ಕಾಕತಾಳೀಯ?’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.